Header Ads
Header Ads
Breaking News

ಕ್ಷಣಕ್ಷಣಕ್ಕೂ ಬಿಗಡಾಯಿಸ್ತಿರೋ ಸಿದ್ಧಗಂಗಾ ಸ್ವಾಮೀಜಿಯವರ ಆರೋಗ್ಯ

ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಇಂದು ಮುಂಜಾನೆಯಿಂದ ಭಾರೀ ಏರುಪೇರು ಕಂಡುಬಂದಿದೆ ಎಂದು ತಿಳಿದುಬಂದಿದೆ.
ಸಹಜವಾಗಿ ಉಸಿರಾಡುತ್ತಿದ್ದ ಸ್ವಾಮೀಜಿಗೆ ಇಂದು ಮುಂಜಾನೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿದ್ಧಗಂಗಾ ಆಸ್ಪತ್ರೆಯ ವೈದ್ಯ ಡಾ.ಪರಮೇಶ್ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರಿದಿದೆ. ಇತ್ತೀಚೆಗೆ ಚೆನ್ನೈನ ರೇಲಾ ಆಸ್ಪತ್ರೆಯ ಡಾ.ಮುಹಮ್ಮದ್ ರೇಲಾ ನೇತೃತ್ವದಲ್ಲಿ ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ಈ ನಡುವೆ ಸ್ವಾಮೀಜಿಯ ಆರೋಗ್ಯದ ಏರುಪೇರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಇಂದಿನ ಹಿರೇಕೆರೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಸಿದ್ಧಗಂಗಾ ಮಠದ ಕಿರಿಯ ಸ್ವಾಮೀಜಿಗೆ ದೂರವಾಣಿ ಕರೆ ಮಾಡಿ ಶಿವಕುಮಾರ ಸ್ವಾಮೀಜಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಈ ನಡುವೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಠಕ್ಕೆ ಆಗಮಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಾ ತನ್ನ ಬರ ಅಧ್ಯಯನ ಪ್ರವಾಸವನ್ನು ರದ್ದುಗೊಳಿಸಿ ಸಿದ್ಧಗಂಗಾ ಮಠದತ್ತ ಆಗಮಿಸಿದ್ದಾರೆ.
ಸ್ವಾಮೀಜಿಯ ಆರೋಗ್ಯ ಏರುಪೇರು ಸುದ್ದಿ ತಿಳಿಯುತ್ತಿದ್ದಂತೆ ಸಿದ್ಧಗಂಗಾ ಮಠದತ್ತ ಧಾವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಠದಲ್ಲೇ ಪೊಲೀಸ್ ಕಂಟ್ರೋಲ್ ರೂಂ ಅನ್ನು ಕೂಡಾ ತೆರೆಯಲಾಗಿದೆ.

Related posts

Leave a Reply