
ಮಂಗಳೂರಿನ ಉರ್ವದಲ್ಲಿರುವ ತುಳು ಅಕಾಡೆಮಿಯ ಸಿರಿಚಾವಡಿಯಲ್ಲಿ ಸುಗ್ಗಿ-ಹುಗ್ಗಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಶಾಸಕ ಜೆ. ಆರ್. ಲೋಬೋ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇದೊಂದು ಒಳ್ಳೆಯ ಸಾಂಸ್ಕೃತಿಕ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳಿಗೆ ಮೊದಲು ಆದ್ಯತೆ ನೀಡಬೇಕು ಎಂದು ಹೇಳಿದರು.
ಇದೇ ವೇಳೆ ಡೊಳ್ಳು ಕುಣಿತ, ಕಂಸಾಲೆ, ಚೆಂಡೆ, ನಾದ ಸ್ವರ ಹಾಗೂ ಇನ್ನಿತರ ಜಾನಪದ ಕಾರ್ಯಕ್ರಮಗಳು ನಡೆಯಿತು.ಈ ಸಂದರ್ಭ ಕಾರ್ಯಕ್ರಮದಲ್ಲಿ ರಾಜೇಂದ್ರ ಚಿಲಿಂಬಿ, ತುಳು ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ, ಸ್ಥಳೀಯ ಕಾರ್ಪೊರೇಟರ್ ರಾಧಾಕೃಷ್ಣ ಉಪಸ್ಥಿತರಿದ್ದರು.
ವರದಿ: ನಾಗರಾಜ್ ಮಂಗಳೂರು