Header Ads
Header Ads
Breaking News

ಸುಪ್ರೀಂಕೋರ್ಟ್‍ನಿಂದ ಆಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ : ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

 ಆಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಅಂತಾ ನಗರ ಪೊಲೀಸ್ ಆಯುಕ್ತ ಡಾ|ಪಿ.ಎಸ್.ಹರ್ಷ ಹೇಳಿದ್ರು.ಈ ಕುರಿತು ಮಂಗಳೂರಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಭಾರತೀಯ ದಂಡ ಸಂಹಿತೆ ಪ್ರಕ್ರಿಯಾ ಸಂಹಿತೆಯ ಕಲಂ 144 ಅನ್ವಯ ನಿರ್ಬಂಧದ ಅಜ್ಞೆ ವಿಧಿಸಿರುವುದಾಗಿ ಎಂದು ತಿಳಿಸಿದರು. ನಗರದಾದ್ಯಂತ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಬಿಗಿ ಬಂದೋಬಸ್ತ್‍ಗಳ ಕೈಗೊಳ್ಳಲಾಗಿದೆ. ಅಂತರ್ ರಾಜ್ಯ ಗಡಿಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗಿದೆ. ಬಂದೋಬಸ್ತ್‍ನಲ್ಲಿ ಡಿಸಿಪಿಗಳು, 15ಇನ್ಸ್ ಸ್ಪೆಕ್ಟರ್ , 40 ಪಿಎಸ್‍ಐಗಳು ,100ಎಎಸ್‍ಐ, 5 ಕೆಎಸ್‍ಆರ್‍ಸಿ ತುಕಡಿ, ಒಂದು ಕೇಂದ್ರೀಯ ಅರೆಸೇನಾ ಪಡೆ , ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ ಎಂದರು.

Related posts

Leave a Reply

Your email address will not be published. Required fields are marked *