Header Ads
Header Ads
Breaking News

ಸುರತ್ಕಲ್‌ನ ರಾಷ್ಟ್ರಭಕ್ತ ನಾಗರಿಕೆ ವೇದಿಕೆಯಿಂದ ಕಾರ್ಗಿಲ್ ವಿಜಯ್ ದಿವಸ್

ಸಮಾಜದಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಲ್ಲಿ ರಾಷ್ಟ್ರಕ್ಕಾಗಿ ತ್ಯಾಗ-ಬಲಿದಾನ ಗೈದ ವೀರರನ್ನು ಸ್ಮರಿಸುವ ಸಲುವಾಗಿ ಸ್ಥಾಪಿತವಾಗಿರುವ ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವೈಶಿಷ್ಠ್ಯಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ತಿಳಿಸಿದರು.ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕಾರ್ಗಿಲ್ ವಿಜಯ್ ದಿವಸ್ ಉದ್ದೇಶದಲ್ಲಿ ವಿದ್ಯಾರ್ಥಿಗಳಲ್ಲಿ ಸೈನ್ಯ ಮತ್ತು ಯೋಧರ ತ್ಯಾಗ ಜೀವನದ ಬಗ್ಗೆ ಅರಿವು ಮೂಡಿಸಲು ಸ್ಪರ್ಧೇಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲದೆ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿಯನ್ನು ವಿತರಿಸಲಾಗುತ್ತಿದೆ. ವೀರ ಯೋಧರ ಸ್ಮರಣರ್ಥ ಹಣತೆ ಮೆರವಣಿಗೆ, ಭಾರತ್ ಮಾತಾ ಪೂಜನ, ನಿವೃತ್ತ ಹಿರಿಯ ಸೈನಿಕರಿಗೆ ಸನ್ಮಾನ-ಗೌರವಾರ್ಪಣೆಗಳ ಸಹಿತವಾಗಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆಯನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಡಂಬೋಡಿ ಮಹಾಬಲ ಪೂಜಾರಿ, ಮಹೇಶ್ ಮೂರ್ತಿ, ನಾಯಕ್ ಭಾಸ್ಕರ್ ರೈ, ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *