Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಸುರತ್ಕಲ್ ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧ ಅಂಗಡಿ ಮುಂಗಟ್ಟು ಬಂದ್ ನಡೆಸಿ, ಪ್ರತಿಭಟನೆ

 

ಸುರತ್ಕಲ್ ಮಾರುಕಟ್ಟೆಯನ್ನು ತಾತ್ಕಾಲಿಕ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ, ಸುರತ್ಕಲ್ ಮಾರುಕಟ್ಟೆ ಮುಂಭಾಗದಲ್ಲಿ ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟು ಬಂದ್ ನಡೆಸಿ, ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಮಾತನಾಡಿ, ಯಾವುದೇ ಮುನ್ಸೂಚನೆ ನೀಡದೇ ಮೈದಾನದಲ್ಲಿರುವ ತಾತ್ಕಾಲಿಕ ಶೆಡ್‌ಗಳಿಗೆ ಸ್ಥಳಾಂತರ ಮಾಡುವ ಮೂಲಕ ಅನ್ಯಾಯ ಮಾಡಲಾಗಿದೆ. ಅಧಿಕಾರಿಗಳು ಕೂಡ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಸ್ಥಳೀಯರನ್ನು ಸಂಪರ್ಕಿಸಿದೇ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿರುವುದು ಸರಿಯಲ್ಲ ಎಂದು ಅವರು ಹೇಳಿದರು. ಈ ವೇಳೆ ಸುರತ್ಕಲ್ ಹೊಸ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಉಮ್ಮರ್ ಫಾರೂಕ್ , ಸಂಘ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಸೇರಿದಂತೆ ಮತ್ತಿತರು ಉಪಸ್ಥತಿರಿದ್ರು.

Related posts

Leave a Reply