Header Ads
Header Ads
Breaking News

ಸುರತ್ಕಲ್ ಮುಕ್ಕದ ಟೋಲ್‌ಗೇಟ್ ತೆರವಿಗೆ ಆಗ್ರಹ:ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳ ವಿರುದ್ಧ ಸಭೆಯಲ್ಲಿ ಆಕ್ರೋಶ

ಸುರತ್ಕಲ್ ಮುಕ್ಕದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಮತ್ತು ಕೂಳೂರು ದುರ್ಬಲ ಸಏತುವೆಗೆ ಬದಲಿ ಹೊಸ ರಸ್ತೆ, ಸರ್ವೀಸ್ ರಸ್ತೆಗಳನ್ನು ನಿರ್ಮಿಸಲು ಆಗ್ರಹಿಸಿ ಎನ್‌ಐಟಿಕೆ ಟೋಲ್‌ಗೇಟ್ ಬಳಿ ಜನಾಗ್ರಹ ಸಭೆ ನಡೆಯಿತು. ಸಭೆಯಲ್ಲಿ ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹಿಸುವ ನಿರ್ಧಾರವನ್ನು ವಿರೋಧಿಸಿ ಮತ್ತು ಜನಪ್ರತಿನಿಧಿಗಳು ಮೌನ ತಾಳಿರುವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ 11 ದಿನಗಳ ಹೋರಾಟವನ್ನು ನಡೆಸಿದ್ದ ಸಂದರ್ಭದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಹೆದ್ದಾರಿ ಪ್ರಾಧಿಕಾರದ ಸಭೆಯನ್ನ ನಡೆಸಿ ಟೋಲ್ ಗೇಟ್ ಮುಚ್ಚಲು ರಾಜ್ಯ ಸರ್ಕಾರದ ಮಟ್ಟದಲ್ಲಿ ಒತ್ತಡ ಹಾಕುವ ಭರವಸೆ ನಿಡಿದ್ದರು.ಆದರೆ ಈ ಭರವಸೆಗಳು ಈಚರೆಗೂ ಈಡೇರಿಲ್ಲ. ಅಷ್ಟೂ ಸಾಲದೆಂಬಂತೆ ಸ್ಥಳೀಯ ಖಾಸಗಿ ವಾಹನಗಳಿಗೆ ಸುಂಕ ವಿನಾಯಿತಿ ರದ್ದುಗೊಳಿಸಿ ಸುಂಕ ವಿಧಿಸಲು ಗುತ್ತಿಗೆದಾರರು ನಿರ್ಧರಿಸಿದ್ದಾರೆ. ಈ ಮೂಲಕ ನಾಗರಿಕರ ಸಹನೆಯನ್ನು ಪರೀಕ್ಷಿಸುವ ರೀತಿಯಲ್ಲಿ ಸರಕಾರವೇ ಲೂಟಿಗಿಳಿದಿದೆ ಎಂದರು. ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ವಿಜಯ್ ಕುಮಾರ್ ಶೆಟ್ಟಿ, ಬಿಕೆ ಇಮ್ತಿಯಾಝ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *