Header Ads
Header Ads
Breaking News

ಸುಳ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಒಂದು ನಾಡಿನ ಕಲೆ, ಸಂಸ್ಕೃತಿಗಳು ಜೀವಂತವಾಗಿರಬೇಕಾದರೆ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಭಾಷೆಗಳ ಸಮಾಮದಿಂದ ಬದುಕು ಬೆಳೆಯುತ್ತದೆ. ಭಾಷೆಯ ಮೇಲಿನ ಅಭಿಮಾನ ತೋರ್ಪಡಿಕೆಗೆ ಆಗಿರದೇ ಭಾವನಾತ್ಮಕವಾಗಿ ಬೆಳೆಯಬೇಕು ಎಂದು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.ಅವರು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿ ಕನ್ನಡ ಭಾಷೆಯ ಬಗೆಗಿನ ಜಾಗೃತಿ ಭಾವನೆಗಳು ನಮ್ಮಲ್ಲಿ ಮೂಡಬೇಕು. ಕನ್ನಡ ನಾಡುನಡಿಗೆ ದುಡಿದ ಹಲವಾರು ಭಾಷೆಯ ಉಳಿವಿಗೆ ಹಲವಾರು ಕೈಜೋಡಿಸಿದ್ದಾರೆ ಎಂದು ಹೇಳಿದರು. ಸಮಾರಂಭದಲ್ಲಿ ಖ್ಯಾತ ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಗೃಹರಕ್ಷಕ ದಳದ ಪುಪ್ಪಾವತಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಎ.ಪಿ.ಎಂ.ಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ, ಡೇವಿಡ್ ಧೀರಾ ಕ್ರಾಸ್ತಾ, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಪೋಲೀಸ್, ಗೃಹರಕ್ಷಕದಳ, ಸ್ಕೌಟ್ಸ್, ಗೈಡ್, ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು. ಸಮಾರಂಭದ ಬಳಿಕ ಆಯ್ದ ಶಾಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ತೆರೆದ ಮೈದಾನದಲ್ಲಿ ನಡೆಯಿತು.

Related posts

Leave a Reply

Your email address will not be published. Required fields are marked *