Header Ads
Header Ads
Breaking News

ಸುಳ್ಯದಲ್ಲಿ ಕಾರ್ಯಕರ್ತರು ಮತ್ತು ಮತದಾರರಿಗೆ ಅಭಿನಂದನಾ ಸಭೆ!

ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಯ ವಿರುದ್ದ ಇಡೀ ಹಿಂದೂ ಸಮಾಜ ಒಟ್ಟಾಗಿತ್ತು.  ಹಿಂದೂ ವಿಚಾರಧಾರೆಯ ಸಿದ್ದಾಂತವೇ ಕರಾವಳಿಯಲ್ಲಿ ಈ ಬಾರಿ ಬಿಜೆಪಿ ಇಷ್ಟು ಜಯಭೇರಿ ಬಾರಿಸಲು ಕಾರಣ ಆಗಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

 

   

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಅಂಗಾರರು ಅಭೂತಪೂರ್ವ ವಿಜಯ ಸಾಧಿಸಿದ ಹಿನ್ನಲೆಯಲ್ಲಿ ಮತದಾರರಿಗೆ, ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರಿಗೆ ಮತ್ತು ಪೇಜ್ ಪ್ರಮುಖರಿಗೆ ನಡೆದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು.ಅಭಿನಂದನೆ ಸ್ವೀಕರಿಸಿ ಮಾತನಾಡಿ ಶಾಸಕ ಎಸ್ ಅಂಗಾರ ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಹೇಳಿಕೊಳ್ಳುವ ಕಾರ್ಯಗಳನ್ನು ಕಾರ್ಯಕರ್ತರು ಮಾಡಬೇಕು. ಹಾಗೆ ಮಾಡದಿದ್ದರೆ ವಿರೋಧಿಗಳಿಗೆ ಬಾಯಿಬಿಚ್ಚಲು ಅವಕಾಶವಾಗುತ್ತದೆ. ನಾವು ಇಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ಅಂತರದ ಗೆಲುವು ಸಾಕೇ? ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಸುಳ್ಯ ಶಾಸಕ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ಅಭಿನಂದಿಸಲಾಯಿತು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹೆಗ್ಡೆ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ನಪಂ.ಅಧ್ಯಕ್ಷೆ ಶ್ರೀಮತಿ ಶೀಲಾವತಿ, ಎಪಿಎಂಸಿ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply