Header Ads
Header Ads
Header Ads
Breaking News

ಸುಳ್ಯದಲ್ಲಿ ಕೆ.ವಿ.ಜಿ ಆಯುರ್ವೇದ ಕಾಲೇಜಿನಲ್ಲಿ ಪದವಿ ಪ್ರಧಾನ,ಗುರುವಂದನೆ ನಿರ್ಮಲಾನಂದನಾಥ ಸ್ವಾಜಿಯಿಂದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ

 

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗುರುವಂದನೆ, ಪದವಿ ಪ್ರಧಾನ ಮತ್ತು ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಈ ವೇಳೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಪದವಿ ಮಾಡಿದರು,

ಬಳಿಕ ಮಾತನಾಡಿದ ಅವರು, ವಿಧ್ಯಾರ್ಥಿ ಜೀವನ ಸುವರ್ಣ ಯುಗ. ಈ ಸಮಯದಲ್ಲಿ ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚು ಮಹತ್ವ ನೀಡಬೇಕು. ಜ್ಞಾನ ಮತ್ತು ಕೌಶಲ್ಯಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ದೇಶದ ಅಭಿವೃದ್ದಿಯಲ್ಲಿ ಕೈಜೋಡಿಸಬೇಕು. ವಿದ್ಯಾರ್ಥಿಗಳು ಕಲಿಕೆ ನಿಲ್ಲಿಸಿದ ಕೂಡಲೇ ಸಂಪಾದನೆಯಲ್ಲಿ ತೊಡಗಿಕೊಳ್ಳುವುದು ಸರಿಯಲ್ಲ ಇದೊಂದು ಖೇದಕರ ವಿಷಯ ಎಂದು ಹೇಳಿದರು.
ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ್ಯಕ್ಕೆ ಹೆಚ್ಚು ಮಹತ್ವ ನೀಡಬೇಕು. ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರು ಮತ್ತು ಪೋಷಕರು ಸಮಾನ ರೀತಿಯಲ್ಲಿ ಪ್ರೋತ್ಸಾಹ, ಕೊಡುಗೆ ನೀಡಬೇಕು. ಹಿಂದಿನ ಕಾಲದಲ್ಲಿ ಇದ್ದ ಗುರುಕುಲ ಪದ್ದತಿ ಬದಲಾಗಿದೆ. ಈಗಿನ ಆಧುನಿಕ ಶಿಕ್ಷಣದಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನ ಮತ್ತು ಕೌಶಲ್ಯವನ್ನು ವೃದ್ದಿಸುತ್ತಿದೆ. ಶೇ. ೯೫% ಜನರು ಇತಿಹಾಸ ಓದುತ್ತಿದ್ದಾರೆ. ಆದರೆ ಇತಿಹಾಸ ಸೃಷ್ಟಿ ಮಾಡುವವರ ಸಂಖ್ಯೆ ಕೇವಲ ೫ ಶೇಕಡಾ ಜನರು. ವಿದ್ಯಾರ್ಥಿಗಳು ಇತಿಹಾಸ ಸೃಷ್ಟಿ ಮಾಡುವತ್ತ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಎಸ್. ಅಂಗಾರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply