Header Ads
Breaking News

ಸುಳ್ಯದಲ್ಲಿ ಪಡಿ ಸಂಸ್ಥೆಯ ವತಿಯಿಂದ ಮಗು ಸ್ನೇಹಿ ಶಾಲೆ ಮತ್ತು ಪಂಚಾಯತ್ ಸಂವಾದ ಕಾರ್ಯಕ್ರಮ

ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಮಾಡಬೇಕಿದೆ. ಇದಕ್ಕಾಗಿ ವಿವಿಧ ಇಲಾಖೆಗಳೊಂದಿಗೆ ತಾಲೂಕಿನ ಶಾಲಾ ಅಭಿವೃದ್ದಿ ಸಮಿತಿಗಳು, ಗ್ರಾಮ ಪಂಚಾಯತ್‌ಗಳೊಂದಿಗೆ ಜಂಟಿ ಸಭೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.ಪಡಿ ಸಂಸ್ಥೆಯಿಂದ ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಮಗು ಸ್ನೇಹಿ ಶಾಲೆ ಮತ್ತು ಪಂಚಾಯತ್ ಸಂವಾದ ಕಾರ್ಯಕ್ರಮದಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಗಳ ರಚನೆ ಆಗಬೇಕು ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪಡಿ ಸಂಸ್ಥೆಯ ಸದಸ್ಯ ಗೋಪಾಲ ಪೆರಾಜೆ ಮಾತನಾಡಿ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ತಮ್ಮ ಮಾತೃಭಾಷೆಯಲ್ಲೇ ಶಿಕ್ಷಣ ಸಿಗಬೇಕು. ಇದಕ್ಕೆ ಸಂಬಂಧಿಸಿ ದೇಶದಲ್ಲಿ ಏಕರೂಪ ಶಿಕ್ಷಣ ಜಾರಿಗೆ ಬರದಿದ್ದರೆ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಅಸಾಧ್ಯ ಎಂದು ಹೇಳಿದರು.

ಸಭೆಯಲ್ಲಿ ಆಲೆಟ್ಟಿ ಮತ್ತು ಉಬರಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳಲ್ಲಿ ಇರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವೀ ಕಾಂಚೋಡು. ಮಹಿಳಾ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಶ್ಮೀ, ತಾಲೂಕು ಪಂಚಾಯತ್ ಮೇನೆಜರ್ ಹರೀಶ್ ಕುಮಾರ್, ತಾ.ಪಂ ಸದಸ್ಯ ಆಶೋಕ್ ನೆಕ್ರಾಜೆ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *