Header Ads
Header Ads
Breaking News

ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಸಮಾರಂಭ ದುಡಿಯುವ ನಿಷ್ಟಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ಮನ್ನಣೆ ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿಕೆ

ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸಲು ದುಡಿಯುವ ನಿಷ್ಟಾವಂತ ಕಾರ್ಯಕರ್ತರಿಗೆ ಮನ್ನಣೆ ನೀಡಿದೆ. ಗ್ರಾಮ ಮಟ್ಟದಲ್ಲಿ ಪಕ್ಷದ ಪ್ರಮಾಣಿಕ ಕೆಲಸ ಆಗಬೇಕು. ಹಿಂದಿನ ಕಾಲದಲ್ಲಿ ನಾಯಕನ ಸುತ್ತ ತಿರುಗುವ ಮುಖಂಡರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿತ್ತು. ಈಗ ನಿಷ್ಟಾವಂತ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗುತ್ತಿದೆ. ಮುಂದಿನ ಚುನಾವಣೆಯ ಗೆಲುವಿಗಾಗಿ ಮತ ಭೇದ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿದರು.
ಅವರು ಸುಳ್ಯದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಅಭಿವೃದ್ದಿ ವಿಚಾರದಲ್ಲಿ ಚುನಾವಣೆ ನಡೆಯುತ್ತಿಲ್ಲ. ಬದಲಾಗಿ ಹಿಂದೂಗಳ ಮೇಲೆ ಮುಸ್ಮಿಮರನ್ನು ಎತ್ತಿಕಟ್ಟಿ ಕೋಮುದ್ವೇಷದ ವಿಷಬೀಜದ ಮಧ್ಯೆ ಚುನಾವಣಾ ವಿಷಯವಾಗಿಸುತ್ತಿದ್ದಾರೆ. ಜನರಿಂದ ಆರಿಸಿ ಬಂದ ಜನಪ್ರತಿನಿಧಿಗಳೇ ರಾಮ ಮತ್ತು ಅಲ್ಲಾವುನ ಮದ್ಯೆ ನಡೆಯುವ ಚುನಾವಣೆ ಎಂದು ದ್ವೇಷ ಭಾವನೆಗೆ ವೇದಿಕೆ ಕಲ್ಪಿಸುತ್ತಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ, ದ.ಕ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಹಾಜಿ ಎನ್ ಎಸ್. ಕರೀಮ್ , ಸುಳ್ಯ ಬ್ಲಾಕ್ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಿ.ಕೆ ಹಮೀದ್‌ಕೆಪಿಸಿಸಿ ಸದಸ್ಯ ಡಾ| ರಘು, ಮಾಜಿ ಶಾಸಕ ಕೆ.ಕುಶಲ, ಅಲ್ಪಸಂಖ್ಯಾತ ಜಿಲ್ಲಾ ಘಟಕದ ಉಪಾದ್ಯಕ್ಷ ಇಸ್ಮಾಯಿಲ್ ಮಾಣಿ, ರಾಜ್ಯ ಮುಖಂಡ ನೂರ್‌ದ್ದೀನ್ ಸಾಲ್ಮರ, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply