Header Ads
Header Ads
Header Ads
Breaking News

ಸುಳ್ಯದಲ್ಲಿ ಶಿಕ್ಷಕರ ದಿನಾಚರಣೆ ನಿವೃತ್ತ ಮತ್ತು ಸಾಧಕ ಗುರುಗಳಿಗೆ ಗೌರವ ಶಿಕ್ಷಕರಿಗೆ ಪಾಠ ಮಾಡಲು ಬಿಡಿ, ಉಪದೇಶ ಬೇಡ ವಿಶ್ರಾಂತ ಉಪನ್ಯಾಸಕ, ಲೇಖಕ ರಾಧಾಕೃಷ್ಣ ಕಲ್ಚಾರ್ ಹೇಳಿಕೆ

 

ಶಿಕ್ಷಕನಿಗೆ ಅತ್ಯಂತ ಸುಖದ ಸಮಯವೆಂದರೆ ವಿದ್ಯಾರ್ಥಿಗಳೊಂದಿಗೆ ತರಗತಿಯಲ್ಲಿ ಕಾಕ್ಷೇಪ ಮಾಡುವುದು ಎಂದರು. ಶಿಕ್ಷಕರು ಪಾಠದಲ್ಲಿ ಸ್ವತಂತ್ರರಾದರೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದಂತಾಗುತ್ತದೆ. ಶಿಕ್ಷಕರನ್ನು ಶಾಲೆಯಲ್ಲಿ ಇರಲು ಬಿಡಿ ಹೊರತಾಗಿ ಯಾವುದೇ ಉಪದೇಶ ಬೇಡ. ಅಧ್ಯಾಪಕರು ಇಂದು ಸೆಮಿಕ್ಲರ್ಕ್‌ಗಳಾಗಿ ಬದಲಾಗಿದ್ದಾರೆ ಎಂದು ವಿಶ್ರಾಂತ ಉಪನ್ಯಾಸಕ, ಲೇಖಕ ರಾಧಾಕೃಷ್ಣ ಕಲ್ಚಾರ್ ಹೇಳಿದರು.

   ಅವರು ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಳ್ಳಿ ರಾಧಾಕೃಷ್ಣ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.ಇ ವೇಳೆ ನಿವೃತ್ತ ಹಾಗೂ ಸಾಧಕ ಶಿಕ್ಷಕರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರನ್ನ ಸನ್ಮಾನಿಸಲಾಯಿತು.ಇದೆ ವೇಳೆ ನಿವೃತ್ತ ಶಿಕ್ಷಕರಿಗೆ, ಎಸ್.ಎಸ್.ಎಲ್.ಸಿ.ಯಲ್ಲಿ ಶೇ. ೧೦೦ ಫಲಿತಾಂಶ ಪಡೆದ ಶಾಲೆಗಳಿಗೆ ಗೌರವಾರ್ಪಣೆ, ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ, ಗೈಡ್ಸ್ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ,ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ , ಜಿ.ಪಂ. ಸದಸ್ಯರಾದ ಶ್ರೀಮತಿ ಆಶಾ ತಿಮ್ಮಪ್ಪ, ಶ್ರೀಮತಿ ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply