Header Ads
Breaking News

ಸುಳ್ಯದ ಕಾಲೇಜು ತರಗತಿಗಳಿಗೆ ಎಸಿ ಭೇಟಿ: ಮೊಬೈಲ್, ಮಾದಕವಸ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ

ವಿದ್ಯಾರ್ಥಿಗಳು ನೈತಿಕ ಶಿಕ್ಷಣ ಮತ್ತು ನೈತಿಕ ಮೌಲ್ಯಗಳ ಕಡೆಗೆ ಗಮನ ನೀಡಬೇಕು. ಈ ಸಮಯದಲ್ಲಿ ಮೊಬೈಲ್ ಬಳಕೆ, ಮಾದಕ ವಸ್ತುಗಳ ಚಟಕೆ ಬಲಿಯಾಗುವುದು, ಸಾಮಾಜಿಕ ಜಾಲತಾಣಗಳ ದುರ್ಬಲಕೆ ಮಾಡಿಕೊಳ್ಳುವುದು ಅಪರಾಧ. ವಿದ್ಯಾರ್ಥಿಗಳು ಶಿಸ್ತು ಪರಿಪಾಲನೆ ಮಾಡಿಕೊಳ್ಳಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್ ಕೃಷ್ಣಮೂರ್ತಿ ಕಾಲೇಜು ವಿದ್ಯಾರ್ಥಿಗಳಿಗೆ ನೀತಿ ಪಾಠ ಮಾಡಿದರು. ಅವರು ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನ ತರಗತಿಗಳಿಗೆ ಭೇಟಿ ನೀಡಿ ಕೆಲಹೊತ್ತು ವಿದ್ಯಾರ್ಥಿಗಳ ಜತೆ ಚರ್ಚಿಸಿದರು. ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣಗಳ ದುರ್ಬಲಕೆಯ ಬಗ್ಗೆ, ಮಾದಕವಸ್ತುಗಳ ಚಟಕೆ ಬಲಿಯಾಗಬಾರದು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು ಎಂದು ಹೇಳಿದ್ರು. ಸತರಗತಿ ಮುಗಿಸಿ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಮಕ್ಕಳಲ್ಲಿ ನೈತಿಕ ಶಿಕ್ಷಣ ಮತ್ತು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವ ಉದ್ದೇಶದಿಂದ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಚರ್ಚಿಸುತ್ತಿದ್ದೇನೆ. ಅಲ್ಲದೇ ವಿದ್ಯಾರ್ಥಿಗಳಿ ಶಿಸ್ತು ಪರಿಪಾಲನೆ ಮಾಡಿಕೊಳ್ಳುವ ಉದ್ದೇಶದಿಂದ ವಿಭಾಗೀಯ ಮಟ್ಟದಲ್ಲಿ ಕಾಲೇಜು ಪ್ರಾಂಶುಪಾಲರ ಮತ್ತು ಶಾಲೆಗಳ ಮುಖ್ಯೋಪಾಧ್ಯಯರಿಗೆ ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದೇವೆ ಎಂದ್ರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕುಂಞಿ ಅಹಮ್ಮದ್, ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ, ಕಂದಾಯ ನಿರೀಕ್ಷಕ ಕೊರಗಪ್ಪ ಶೆಟ್ಟಿ, ಪ್ರೋಬೇಷನರಿ ಎಸ್.ಐ. ಸಂತೋಷ್ ಕುಮಾರ್, ಎ.ಎಸೈ ಗಂಗಾಧರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *