Header Ads
Header Ads
Breaking News

ಸುಳ್ಯದ ಡಾ. ಕುರುಂಜಿ ವೆಂಕಟ್ರಮಣ ಗೌಡ ಪುತ್ತಳಿ ಲೋಕಾರ್ಪಣೆ

ಸುಳ್ಯದ ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುತ್ತಳಿ ಕುರುಂಜಿ ವೆಂಕಟ್ರಮಣ ಗೌಡ ಸ್ಮಾರಕ ನಿರ್ಮಾಣ ಸಮಿತಿ ವತಿಯಿಂದ ಸಿದ್ದವಾಗಿದ್ದು ಕೇಂದ್ರ ಸರಕಾರದ ವಾಣಿಜ್ಯ ಸಚಿವ ಸುರೇಶ್ ಪ್ರಭು ಅವರು ಪುತ್ತಳಿ ಅನಾವರಣಗೊಳಿಸಲಿದ್ದಾರೆ ಎಂದು ಕುರುಂಜಿ ಸ್ಮಾರಕ ನಿರ್ಮಾಣ ಸಮಿತಿಯ ಅಧ್ಯಕ್ಷ ಶಾಸಕ ಅಂಗಾರ ಹೇಳಿದರು.

ಅವರು ಸುಳ್ಯದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಪುತ್ತಳಿ ಅನಾವರಣದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.
ಭಾರತ ಸರಕಾರದ ರಸಗೊಬ್ಬರ ಮತ್ತು ಸಾಂಖ್ಯಿಕ ಸಚಿವ ಡಿ.ವಿ ಸದಾನಂದ ಗೌಡ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶಾಸಕ ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳೀನ್‌ಕುಮರ್ ಕಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎ.ಎಲ್.ಒ.ಇ ಅಧ್ಯಕ್ಷ ಡಾ.ಕೆ.ವಿ ಚಿದಾನಂದ,ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾದವ, ಎ.ಎಲ್.ಒ.ಇ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ಸ್ಮಾರಕ ನಿರ್ಮಾಣ ಸಮಿತಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ ಉಪಸ್ಥಿತರಿದ್ದರು.

Related posts

Leave a Reply