Header Ads
Header Ads
Breaking News

ಸುಳ್ಯದ ವಳಲಂಬೆಯಲ್ಲಿ ತಾಲೂಕು ಮಟ್ಟದ ಯುವ ಸಮ್ಮೇಳನ

ಸುಳ್ಯ:ಯುವಜನ ಸಂಯುಕ್ತ ಮಂಡಳಿ ವತಿಯಿಂದ ವಳಲಳಂಬೆ ಮಿತ್ರ ಬಳಗದ ಸಹಕಾರದೊಂದಿಗೆ ಸುಳ್ಯ ತಾಲೂಕು ಮಟ್ಟದ ಯುವ ಸಮ್ಮೇಳನವು ಡಿ. ೨ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ತಿಳಿಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನವನ್ನು ಶಾಸಕ ಎಸ್.ಅಂಗಾರ ಉದ್ಘಾಟಿಸಲಿದ್ದು, ಜಿ.ಪಂ. ಸದಸ್ಯ ಶ್ರೀಮತಿ ಆಶಾ ತಿಮ್ಮಪ್ಪ, ಲಯನ್ಸ್ ಕ್ಲಬ್ ಮಾಜಿ ರಾಜ್ಯಪಾಲ ಎಂ.ಬಿ..ಸದಾಶಿವ, ವಳಲಂಬೆ ದೇವಸ್ಥಾನದ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ, ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯ ವೆಂಕಟ್ ವಳಲಂಬೆ ಭಾಗವಹಿಸಲಿದ್ದಾರೆ.
ಬಳಿಕ ನಡೆಯುವ ವಿಚಾರಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇ ಗೌಡರು ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು ಪ್ರಸ್ತುತತೆಯ ಬಗ್ಗೆ ಮಾತನಾಡಲಿದ್ದಾರೆ. ಬಳಿಕ ನಡೆಯುವ ವಿಚಾರಗೋಷ್ಠಿಯಲ್ಲಿ ಶ್ರೀಮತಿ ಸಹನಾ ಕಾಂತಬೈಲು ಅಧ್ಯಕ್ಷತೆ ವಹಿಸಲಿದ್ದು, ಲೇಖಕ, ಪ್ರಾಧ್ಯಾಪಕ ಡಾ. ನರೇಮದ್ರ ರೈ ದೇರ್ಲ ಕೃಷಿಯ ಬದುಕಿನೊಂದಿಗೆ ಯುವ ಜನರು ಎಂಬ ವಿಚಾರವಾಗಿ ಮಾತನಾಡಲಿದ್ದಾರೆ. ನಂತರ ಮನದ ಮಾತು, ಹಾಡು, ನೃತ್ಯ ಕಾರ್ಯಕ್ರಮಗಳು ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಯುವಜನ ಸಂಯುಕ್ತ ಮಂಡಳಿ ಗೌರವಾಧ್ಯಕ್ಷ ಚಂದ್ರಶೇಖರ ಪನ್ನೆ, ಪೂರ್ವಾಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಕ್ರೀಡಾ ಕಾರ್ಯದರ್ಶಿ ಶಂಕರ್ ಪೆರಾಜೆ, ನಿರ್ದೇಶಕರುಗಳಾದ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್ ಉಪಸ್ಥಿತರಿದ್ದರು.

 

ವರದಿ: ಪದ್ಮನಾಭ ಸುಳ್ಯ

Related posts

Leave a Reply