Header Ads
Breaking News

ಸುಳ್ಯದ ಶಾಸಕ ಅಂಗಾರ ಸಹಿತ ಎಳು ಮಂದಿ ಸಚಿವರಾಗಿ ಪ್ರಮಾಣವಚನ

ಬೆಂಗಳೂರು : ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೂತನ 7 ಶಾಸಕರು ಸಚಿವರಾಗುವ ಮೂಲಕ ಸೇರ್ಪಡೆಗೊಂಡಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ 7 ಶಾಸಕರು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಅರವಿಂದ ಲಿಂಬಾವಳಿ, ಆರ್.ಶಂಕರ್, ಎಂಟಿಬಿ.ನಾಗರಾಜ್, ಎಸ್ ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೀಶ್ವರ್ ಹಾಗೂ ಉಮೇಶ್ ಕತ್ತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೊದಲು ಆಗಮಿಸಿದಂತ ಶಾಸಕ ಉಮೇಶ್ ಕತ್ತಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆನಂತರ ಅರವಿಂದ ಲಿಂಬಾವಳಿಯವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಎಂ.ಟಿ.ಬಿ.ನಾಗರಾಜ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮುರುಗೇಶ್ ನಿರಾಣಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಳಿಕ ಆರ್.ಶಂಕರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇವರಾದ ನಂತರ ಸಿ.ಪಿ.ಯೋಗೀಶ್ವರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಎಸ್ ಅಂಗಾರ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

 

ರಾಜ್ಯಪಾಲ ವಜುಬಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೂಗುಚ್ಚ ನೀಡಿ ಅಭಿನಂದಿಸಿದರು.

Related posts

Leave a Reply

Your email address will not be published. Required fields are marked *