Header Ads
Header Ads
Breaking News

ಸುಳ್ಯ: ಕ್ರೀಡಾ ವಿದ್ಯಾರ್ಥಿಗಳಿಗೆ ತಾ.ಪಂ.ಯಿಂದ ಕ್ರೀಡಾ ಸಮವಸ್ತ್ರ ವಿತರಣೆ

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ನಡೆದ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟದಿಂದ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ತಾಲೂಕಿನ 113 ವಿದ್ಯಾರ್ಥಿಗಳಿಗೆ ತಾಲೂಕು ಪಂಚಾಯತ್ ವತಿಯಿಂದ ನೀಡಲಾಗುವ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಯಿತು.ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ಆರೋಗ್ಯಕ್ಕೆ ಉತ್ತಮ ಔಷಧಿ. ಕ್ರೀಡೆಯ ಮೂಲಕ ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸುವ ಕೆಲಸ ಇಂದಿನ ಯುವಜನರಿಂದ ಆಗಬೇಕು.

ಸರಕಾರ ಕೂಡ ಕ್ರೀಡಾ ಚಟುವಟಿಕೆಗಳ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಹೇಳಿದರು.ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಪ್ರಸ್ತಾವಿಕ ಮಾತನಾಡಿದರು.ಸಮಾರಂಭದಲ್ಲಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಧುಕುಮಾರ್, ತಾಲೂಕು ಪಂಚಾಯತ್ ಸದಸ್ಯರಾದ ತೀರ್ಥರಾಮ ಜಾಲ್ಸೂರು, ಪುಷ್ಪಾ ಮೇದಪ್ಪ ಗೌಡ, ಪದ್ಮಾವತಿ ಕುಡೆಂಬಿ, ಜಾಹ್ನವಿ ಕಾಂಚೋಡು, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ವನಿತಾ ಉಪಸ್ಥಿತರಿದ್ದರು.

Related posts

Leave a Reply