Header Ads
Header Ads
Breaking News

ಸೆಪ್ಟೆಂಬರ್ 7ರಿಂದ 15ರವರೆಗೆ ಜೇಸೀ ಸಪ್ತಾಹ-2019

44 ವರ್ಷ ಇತಿಹಾಸವಿರುವ ಜೇಸಿಐ ಪಡುಬಿದ್ರಿಯ ವತಿಯಿಂದ ಸಾರ್ವಜನಿಕ ಸಂಪರ್ಕದ ಉದ್ದೇಶದಿಂದ ಹಮ್ಮಿಕೊಂಡಿರುವ ಜೇಸೀ ಸಪ್ತಾಹ-2019 ಈ ಬಾರಿ ಸೆಪ್ಟಂಬರ್ 7ರಿಂದ 15ರವರೆಗೆ ನಡೆಯಲಿದೆ ಜೇಸಿಐ ಪಡುಬಿದ್ರಿಯ ಅಧ್ಯಕ್ಷ ಅನಿಲ್ ಶೆಟ್ಟಿ ತಿಳಿಸಿದ್ದಾರೆ.

ಕಾಪು ಪ್ರೆಸ್ ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.7 ಶನಿವಾರ ಪಲಿಮಾರು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಂಜೆ 7 ಗಂಟೆಗೆ ಸಪ್ತಾಹದ ಉದ್ಘಾಟನೆ ನಡೆಯಲಿದ್ದು, ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ರಾವ್ ಉದ್ಘಾಟಿಸಲಿದ್ದಾರೆ. ಅಂದು ರಾತ್ರಿ 7 ಗಂಟೆಯಿಂದ ಬಲೇ ತೆಲಿಪಾಲೆ ಖ್ಯಾತಿಯ ದೀಪಕ್ ರೈ ಪಾಣಾಜೆ ತಂಡದಿಂದ ಹಾಸ್ಯ ಪ್ರಹಸನ ನಡೆಯಲಿದೆ ಎಂದು ಮಾಹಿತಿ ನೀಡಿದ್ರು.

ಸುದ್ದಿಗೋಷ್ಠಿಯಲ್ಲಿ ಜೇಸಿಐ ಪಡುಬಿದ್ರಿಯ ಪೂರ್ವಾಧ್ಯಕ್ಷ ಹರೀಶ್ ಹೆಜ್ಮಾಡಿ ಮತ್ತು ರಾಮಚಂದ್ರ ಆಚಾರ್ಯ, ಕಾರ್ಯದರ್ಶಿ ಪ್ರದೀಪ್ ಆಚಾರ್ಯ, ಶಿವರಾಜ್ ಮೊಯಿಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *