Header Ads
Header Ads
Breaking News

ಸೆ.13ರಿಂದ 15ರವರೆಗೆ ಉಡುಪಿಯಲ್ಲಿ ಸೌತ್ ಜೋನ್ ಅಥ್ಲೆಟಿಕ್ ಚಾಂಪಿಯನ್ ಶಿಪ್

ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯು ಯುವಜನಸೇವಾ ಕ್ರಿಡಾ ಇಲಾಖೆಯ ಸಹಯೋಗದೊಂದಿಗೆ ಸೆಪ್ಟಂಬರ್ 13ರಿಂದ 15ರವರೆಗೆ ಅಖಿಲ ಭಾರತ ದಕ್ಷಿಣ ವಲಯ ಕಿರಿಯರ ಕ್ರೀಡಾಕೂಟವನ್ನು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಆಯೋಜಿಸಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿಯ ಅದ್ಯಕ್ಷ ಹಾಗೂ ಶಾಸಕ ರಘುಪತಿಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕರಾವಳಿ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಅಖಿಲ ಭಾರತ ದಕ್ಷಿಣ ವಲಯ ಕಿರಿಯರ ಕ್ರೀಡಾಕೂಟ ಉಡುಪಿಯಲ್ಲಿ ನಡೆಯಲಿದೆ. ಈ ಕ್ರೀಡಾಕೂಟಕ್ಕೆ ದಕ್ಷಿಣ ಭಾರತದ 8 ರಾಜ್ಯಗಳಾದ ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ , ಕೇರಳ, ತಮಿಳುನಾಡು, ಲಕ್ಷ ದ್ವೀಪ, ಅಂಡಮಾನ್ ನಿಕೋಬಾರ್ ಹಾಗೂ ಪಾಂಡೀಚೇರಿಯಿಂದ ಒಟ್ಟು 1250 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 150 ತಾಂತ್ರಿಕ ಅಧಿಕಾರಿಗಳು, 100 ಮಂದಿ ಸ್ವಯಂ ಸೇವಕರು ಈ ಕ್ರೀಡಾಕೂಟದ ಯಶಸ್ಸಿಗೆ ಶ್ರಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ನಾಯಕ್, ಉಪಾದ್ಯಕ್ಷ ಹರೀಶ್ ಹೆಗ್ಡೆ, ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್, ದಿನೇಶ್ ಕುಮಾರ್, ಬಾಲಕೃಷ್ಣ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *