Header Ads
Breaking News

ಸೆ.15ರಂದು ಕಿದಿಯೂರು ಹೊಟೇಲಿನ ಪವನ್ ಸಭಾಂಗಣದಲ್ಲಿ ತುಳುಕೂಟ ಉಡುಪಿ ವತಿಯಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ತುಳುಕೂಟ ಉಡುಪಿ ವತಿಯಿಂದ ನೀಡಲಾಗುವ 25ನೇ ವರ್ಷದ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು 7ನೇ ವರ್ಷದ ಮಲ್ಪೆ ರಾಮದಾಸ ಸಾಮಗ ಪ್ರಶಸ್ತಿ ಪ್ರದಾನ ಸಮಾರಂಭ ಸೆ.15ರಂದು ಕಿದಿಯೂರು ಹೊಟೇಲಿನ ಪವನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ತುಳುಕೂಟ ಉಡುಪಿಯ ಅಧ್ಯಕ್ಷ ವಿಜಿ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಅವರು 25ನೇ ಎಸ್.ಯು ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ವಿಜೇತ ಯುವ ಸಾಹಿತಿಗಳಾದ ಅಕ್ಷತ ರಾಜ್ ಪೆರ್ಲ ಅವರ ಬೊಳ್ಳಿ, ರಾಜಶ್ರೀ ಟಿ ರೈ ಪೆರ್ಲ ಅವರ ಚೌಕಿ ಕಾದಂಬರಿಯನ್ನ ಆಯ್ಕೆ ಮಾಡಲಾಗಿದೆ. ಮಲ್ಪೆ ರಾಮದಾಸ ಸಾಮಗ ಪ್ರಶಸ್ತಿಗೆ ಹಿರಿಯ ಯಕ್ಷ್ಜಗಾನ ಭಾಗವತ ದಿನೇಶ್ ಅಮ್ಮಣ್ಣಾಯ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೋ.ಬಿ.ಎ ವಿವೇಕ ರೈ, ತುಳು ಸಾಹಿತ್ಯ ಅಕಾಡಮಿಯ ಮಾಜಿ ಅದ್ಯಕ್ಷ ಎ.ಸಿ ಭಂಡಾರಿ, ಉದ್ಯಮಿಗಳಾದ ಭುವನೇಂದ್ರ ಕಿದಿಯೂರು, ಪುರುಷೋತ್ತಮ ಶೆಟ್ಟಿ, ವಿಶ್ವನಾಥ ಶೆಣೈ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Related posts

Leave a Reply

Your email address will not be published. Required fields are marked *