Header Ads
Breaking News

ಸೆ.15ರಂದು ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ವತಿಯಿಂದ ಓಣಂ ಹಬ್ಬ

ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ವತಿಯಿಂದ 27ನೇ ವಾರ್ಷಿಕೋತ್ಸವ ಮತ್ತು ಓಣಂ ಹಬ್ಬದ ಆಚರಣೆ ಸೆ.15ರಂದು ಬನ್ನಂಜೆಯ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸಂಘದ ಅದ್ಯಕ್ಷ ಪಿ.ಎ ಮೋಹನ್ ದಾಸ್ ಮಾಹಿತಿ ನೀಡಿದರು. ಓಣಂ ಹಬ್ಬದ ಹಿನ್ನಲೆಯಲ್ಲಿ ಬೆಳಗ್ಗೆ ಪೂಕಳಂ ಸ್ಪರ್ದೆ ನಡೆಯಲಿದೆ. ವಾರ್ಷಿಕೋತ್ಸವ ಮತ್ತು ಓಣಂ ಹಬ್ಬದ ಆಚರಣೆಯನ್ನ ಬಂದರು, ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ರಘುಪತಿಭಟ್, ಲಯನ್ಸ್ ಕ್ಲಬ್ ಇಂಟರ್ ನ್ಯಾಶನಲ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್ ವಿಜಿ ಶೆಟ್ಟಿ , ನ್ಯಾಶನಲ್ ರಿಸರ್ಜ್ ಪ್ರೊಫೆಸರ್ ಪದ್ಮವಿಭೂಷಣ ಡಾ. ಎಮ್.ವಲಿಯತ್ತಾನ್ , ಎಸ್ಪಿ ನಿಶಾ ಜೇಮ್ಸ್, ತುಳು ಚಿತ್ರನಟ ಅರವಿಂದ ಬೋಳಾರ್ ಮುಂತಾದವರು ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಟಿಯಲ್ಲಿ ಕಾರ್ಯದರ್ಶಿ ಕೆವಿ ಕುಮಾರ್, ಕೋಶಾಧಿಕಾರಿ ಪ್ರಸನ್ನ ರಾಜ್, ಲಯನ್ ಸುಗುಣ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *