Header Ads
Breaking News

ಸೆ.20ರಂದು ಕರಾವಳಿ ಮೈದಾನದಲ್ಲಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಬಾಲ ಬಾಲಕಿಯರ ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಂಗ್ರೆ ಕಸಬ ಇದರ ಸಂಯುಕ್ತ ಆಶ್ರಯದಲ್ಲಿ ಪೌಢ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆಪ್ಟಂಬರ್ 20ರಂದು ಮಂಗಳೂರಿನ ಕರಾವಳಿ ಮೈದಾನದಲ್ಲಿ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಹರೀಶ್ ರೈ ತಿಳಿಸಿದರು.

ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನಿಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಂಗ್ರೆ ಕಸಬ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ 7 ತಾಲೂಕುಗಳಿಂದ 28 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿದೆ. ಸುಮಾರು 400 ಕ್ರೀಡಾಳುಗಳು ಮತ್ತು ಸುಮಾರು 200 ಅಧಿಕಾರಿಗಳು, ತೀರ್ಪುಗಾರರು, ತರಬೇತುದಾರರು ಮತ್ತು ಸ್ವಯಂ ಸೇವಕರು ಸೇರಿ 650 ಕ್ರೀಡಾಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ದೈಹಿಕ ಶಿಕ್ಷಕರಾದ ನಾಗೇಶ್, ದಯಾನಂದ ಮಾಡ, ಜಿಲ್ಲಾ ದೈಹಿಕ ಶಿಕ್ಷಣ ಇಲಾಖೆಯ ಅಧಿಕಾರಿ ರಘುನಾಥ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *