Header Ads
Breaking News

ಸೆ.21ರಿಂದ 24ರ ತನಕ ರಂಗಭಾಸ್ಕರ ನಾಟಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ರಂಗಸಂಗಾತಿ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ರಂಗಭಾಸ್ಕರ ನಾಟಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆಪ್ಟಂಬರ್ 21ರಿಂದ 24ರ ತನಕ ಸಂತ ಅಲೋಶಿಯಸ್ ಕಾಲೇಜಿನ ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ರಂಗಸಂಗಾತಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದರು.

ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಂಗಸಂಗಾತಿ ಸಾಂಸ್ಕøತಿಕ ಪ್ರತಿಷ್ಠಾನ ಮಂಗಳೂರು ಕನ್ನಡ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಇದರ ಸಹಯೋಗದೊಂದಿಗೆ ರಂಗ ಭಾಸ್ಕರ-2019 ನಾಲ್ಕು ದಿನಗಳ ನಾಟಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಕೆನರಾ ಹೈಸ್ಕೂಲ್‍ನ ಅಸೋಸಿಯೇಶನ್‍ನ ಗೌರವ ಕಾರ್ಯದರ್ಶಿ ರಂಗನಾಥ್ ಭಟ್ ಅವರು ನಾಟಕೋತ್ಸವವನ್ನು ಉದ್ಘಾಟಿಸಲಿದ್ದಾರೆ. ರೆವರೆಂಡ್ ಫಾದರ್ ಡಾ. ಪ್ರವೀಣ್ ಮಾರ್ಟಿಸ್, ಆನಂದ ಶೆಟ್ಟಿ, ರವೀಂದ್ರ ಪೂಜಾರಿ, ಸತೀಶ್ ಬೋಳಾರ್ ಉಪಸ್ಥಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ಇನ್ನು ರಂಗಭಾಸ್ಕರ-2019 ಪ್ರಶಸ್ತಿಯನ್ನು ಹಿರಿಯ ರಂಗ ನಿರ್ದೇಶಕ, ರಂಗಕರ್ಮಿ, ರಂಗ ಚಿನ್ನಾರಿ ಕಾಸರಗೋಡು ಚಿನ್ನಾರವರಿಗೆ ಪ್ರಧಾನ ಮಾಡಲಾಗುವುದು ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕರುಣಾಕರ್ ಶೆಟ್ಟಿ, ಗಿರೀಶ್ ಬೆಳ್ಚಡ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *