Header Ads
Header Ads
Header Ads
Breaking News

ಸೆ.9 ರಂದು ಸುಳ್ಯ ತಾ| ಅಥ್ಲೆಟಿಕ್ಸ್ ಅಸೋಸಿಯೇಶನ್ ಉದ್ಘಾಟನೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ರಾಜ್ಯಮಟ್ಟದ ಅಥ್ಲೆಟಿಕ್ ಕಾರ್ಯಾಗಾರ

 

ಸುಳ್ಯ ತಾಲೂಕು ಅಥ್ಲೆಟಿಕ್ಸ್ ಅಸೋಸಿಯೇಶನ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉದ್ಘಾಟನಾ ಸಮಾರಂಭ ಸೆ. 9ರಂದು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಅಸೋಸಿಯೇಶನ್ ಕಾರ್ಯದಶಿ ಸುಬ್ರಹ್ಮಣ್ಯ ಕೆ.ಎಂ. ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ ಅಥ್ಲೆಟಿಕ್ಸ್ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವುದು ಮತ್ತು ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಗೌರವಿಸಿ ಅವರಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು. ಅಲ್ಲದೇ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಕ್ರೀಡೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರ ಮತ್ತು ಕ್ರೀಡಾ ಕಾರ್ಯಾಗಾರ ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ಸಂಘಟಿಸುವ ಮೂಲಕ ಭವಿಷ್ಯದ ದಿನಗಳಲ್ಲಿ ತಾಲೂಕಿನ ಕ್ರೀಡಾಪಟುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೂಪುಗೊಳಿಸುವುದು ಅಥ್ಲೆಟಿಕ್ಸ್ ಅಸೋಸಿಯೇಶನ್ ಮುಖ್ಯ ಉದ್ದೆಶ ಆಗಿದೆ ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಅಸೋಸಿಯೇಶನ್ ಅಧ್ಯಕ್ಷ ಮಾಯಿಲಪ್ಪ ಗುತ್ತಿಗಾರು, ಉಪಾಧ್ಯಕ್ಷ ಲಕ್ಷ್ಮೀಶ್ ರೈ, ಜತೆ ಕಾರ್ಯದರ್ಶಿ ಹರಿಪ್ರಕಾಶ್ ಅಡ್ಕಾರ್, ಖಜಾಂಜಿ ವಸಂತ ಎ.ಸಿ. ಉಪಸ್ಥಿತರಿದ್ದರು.

Related posts

Leave a Reply