Header Ads
Breaking News

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ವತಿಯಿಂದ ಫರಂಗಿಪೇಟೆಯಲ್ಲಿ 110 ನೇ ರಕ್ತದಾನ ಶಿಬಿರ

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 110 ನೇ ರಕ್ತದಾನ  ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಉದ್ಘಾಟಿಸಿದರು. ಅವರು ಮಾತನಾಡಿ ಒಂದು ಯುನಿಟ್ ರಕ್ತದಾನ ಮಾಡುವುದರಿಂದ ನಾಲ್ಕು ಮಂದಿಯ ಜೀವ ಉಳಿಸಲು ಸಾಧ್ಯವಿದೆ ಎಂದರು.ರೋಟರಿ ಕ್ಲಬ್‍ನ ನಿಯೋಜಿತ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತಕ್ಕೆ ಪರ್ಯಾಯವಾದುದ್ದು ಬೇರಾವುದು ಇಲ್ಲ. ತುರ್ತು ಸಂದರ್ಬದಲ್ಲಿ ರಕ್ತದ ಅವಶ್ಯಕತೆ ಬಿದ್ದಾಗ ದಾನ ಮಾಡಿಯೇ ರಕ್ತವನ್ನು ನೀಡಬೇಕು ಹೊರತು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ ಎಂದರು.

ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೋಕ್ತೇಸರ ಪದ್ಮರಾಜ್ ಬಲ್ಲಾಳ್ ಮಾವಂತೂರು, ರೋಟರಿ ಸದಸ್ಯ ಬಸ್ತಿ ಮಾಧವ ಶೆಣೈ, ಸೇವಾಂಜಲಿಯ ಅರ್ಕುಳ ಕಂಪ ಸದಾನಂದ ಆಳ್ವ, ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ಸಿ. ಜಿ. ಥೋಮಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *