Header Ads
Breaking News

ಸೋಮವಾರ ಮಿಥುನ್ ರೈ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈ ಸ್ಪರ್ಧಿಸಲಿದ್ದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಕಾಂಗ್ರೆಸ್ ಹೈಕಮಾಂಡ್ ಯುವ ಅಭ್ಯರ್ಥಿಯನ್ನಾಗಿ ಮಿಥುನ್ ರೈ ಅವರನ್ನು ಆಯ್ಕೆ ಮಾಡಿದೆ. ಚುನಾವಣಾ ಪೂರ್ವ ತಯಾರಿಯನ್ನು ಮಾಡಲಾಗಿದೆ.ದಕ್ಷಿಣ ಕನ್ನಡದ ನಿಷ್ಕ್ರೀಯ ಸಂಸದರನ್ನು ಬದಲಾಯಿಸಬೇಕು.ಯುವ ಚತುರ ಸಂಸದರ ಅಗತ್ಯ ಮಂಗಳೂರಿಗೆ ಬೇಕಾಗಿದೆ ಎಂದು ಹೇಳಿದರು.
ಆನಂತರ ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಜೆಡಿಎಸ್‌ನವರು ಸಹಾಯ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಸಂಸದರಿದ್ದಾಗ ಬಹಳಷ್ಠು ಅಭಿವೃದ್ಧಿ ಕಾರ್ಯ ಮಾಡಿದ್ದರು. ಬಿಜೆಪಿ ಸಂಸರದ ಹೆಜ್ಜೆ ಗುರುತು ಏನಿದೆ ಎಂದು ಪ್ರಶ್ನಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಗಿತಗೊಂಡಿದೆ. ಸುಳ್ಳು ನೆಪ ಹೇಳಿ ಬಿಜೆಪಿ ಸಂಸದರು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಹೈಕಮಾಂಡ್ ಟಿಕೆಟ್‌ನ್ನು ನೀಡಿದ್ದಾರೆ. ಈ ಜಿಲ್ಲೆಯಲ್ಲಿ ಬದಲಾವಣೆಯನ್ನು ತರಬೇಕೆಂಬ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರ ಜೊತೆಗೂಡಿ ಮಿಥುನ್ ರೈ ಅವರನ್ನು ಗೆಲ್ಲಿಸುವಲ್ಲಿ ಸಹಾಯ ಮಾಡುತ್ತೇವೆ. ಬಿಜೆಪಿಗರ ಸುಳ್ಳು ಹೇಳಿಕೆಯೇ ಮಿಥುನ್ ರೈ ಅವರ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಸಚಿವ ಯು.ಟಿ. ಖಾದರ್, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಮೊಯ್ದಿನ್ ಬಾವಾ, ಜೆ.ಆರ್ ಲೋಬೋ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಪವನ್ ಕಾಜಿಮಡ್ಕ ಮಂಗಳೂರು

Related posts

Leave a Reply

Your email address will not be published. Required fields are marked *