Header Ads
Breaking News

ಸೌದಿಯಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡ ವ್ಯಕ್ತಿಗೆ ಆಸರೆಯಾದ ಕೆಸಿಎಫ್: ಸಚಿವ ಖಾದರ್‌ರಿಂದ ವ್ಯಕ್ತಿಗೆ ಸಾಂತ್ವನ

ಸೌದಿ ಅರೇಬಿಯಾದಲ್ಲಿ ಅಪಘಾತಕ್ಕೊಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ಶಂಕರ್ ಎಂಬ ವ್ಯಕ್ತಿಗೆ ಕರ್ನಾಟಕದ ಕೆ.ಸಿ.ಎಫ್ ತಂಡ ಆಸರೆಯಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡಿನ ನಾಗರಕೊಯಿಲ್ ನಿವಾಸಿ ಶಂಕರ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಮದೀನಾ ಸಮೀಪದಲ್ಲಿ ಕಾರು ಅಪಘಾತಕ್ಕೀಡಾಗಿತ್ತು. ಈ ಸಂದರ್ಧ ಶಂಕರ್ ಗಂಭೀರವಾಗಿ ಗಾಯಗೊಂಡು ಮದೀನಾದ ಕಿಂಗ್ ಫಹದ್ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿದ ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್ ತಂಡ ಏಕಾಂಗಿಯಾಗಿ ಅಸಹಾಯಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಮಲಗಿದ್ದ ಶಂಕರ್ ಅವರನ್ನು ಭೇಟಿಯಾಗಿ ಉಪಚರಿಸಿ, ಅವರಿಗೆ ಬೇಕಾಗುವ ಅವಶ್ಯಕತೆಗಳನ್ನು ಪೂರೈಸಿ ಸಾಂತ್ವನ ಹೇಳಿತ್ತು.

ಇನ್ನು ಪವಿತ್ರ ಉಮ್ರಾಗೆ ತೆರಳಿ ಮದೀನಾ ಝಿಯಾರತ್‌ಗೆ ಆಗಮಿಸಿದ ಕರ್ನಾಟಕದ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಅವರು ಕೆ.ಸಿ.ಎಫ್ ಕಾರ್ಯಕರ್ತರ ಜೊತೆಗೆ ಮದೀನಾದ ಕಿಂಗ್ ಫಹದ್ ಆಸ್ಪತ್ರೆಗೆ ಭೇಟಿ ನೀಡಿ, ಶಂಕರ್‌ರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಈ ಸಂದರ್ಭ ಕೆಸಿಎಫ್ ಮದೀನಾ ಮುನವ್ವರ ಸೆಕ್ಟರ್ ಸಾಂತ್ವನ ತಂಡದ ಪ್ರಮುಖ ತಾಜುದ್ದೀನ್ ಸುಳ್ಯ, ರಝಾಕ್ ಉಳ್ಳಾಲ್, ಜಬ್ಬಾರ್ ಕಾವಳಕಟ್ಟೆ, ಹುಸೈನಾರ್ ಮಾಪಲ್, ಆಶ್ರಫ್ ಸಖಾಫಿ ನೂಜಿ, ಆಸಿಫ್ ಬದ್ಯಾರ್, ಹಮೀದ್ ಕಲ್ಲರ್ಬೆ ಸಹಿತ ಸೆಕ್ಟರ್ ಸಮಿತಿಯ ಕಾರ್ಯಕರ್ತರು ಜೊತೆಯಲ್ಲಿದ್ದರು.

Related posts

Leave a Reply

Your email address will not be published. Required fields are marked *