Header Ads
Breaking News

ಸ್ಕಾಲರ್‌ಶಿಪ್ ವಿಳಂಬದಿಂದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟ-ಪುತ್ತೂರಿನಲ್ಲಿ ಸಿಎಫ್‌ಐ ಮುಖಂಡ ಸವಾದ್ ಕಲ್ಲರ್ಪೆ ಆರೋಪ

ಪುತ್ತೂರು : ಸ್ಕಾಲರ್‌ಶಿಪ್ ಮಂಜೂರಾತಿಯಲ್ಲಿ ವಿಳಂಬ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಪಿಹೆಚ್‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿ ಸರಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಕ್ಯಾಂಪ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಮುಖಂಡ ಸವಾದ್ ಕಲ್ಲರ್ಪೆ ಆರೋಪಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷ ಇನ್ನೇನು ಆರಂಭಗೊಳ್ಳಲಿದ್ದು, ಕೊರೋನಾ ಪರಿಣಾಮ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಪೋಷಕರು ತಮ್ಮ ಮಕ್ಕಳ ದಾಖಲಾತಿ ಶುಲ್ಕ ಕಟ್ಟಲು ಪರದಾಡುತ್ತಿದ್ದಾರೆ. ಇನ್ನೊಂದು ಕಡೆ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಿಸಿರುವುದಲ್ಲದೆ ಶುಲ್ಕ ಕಟ್ಟಲು ಒತ್ತಾಯಿಸುವ ಮೂಲಕ ಪೋಕರಿಗೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ಸರಕಾರ ಈ ಕುತಿರು ಮಾರ್ಗಸೂಚಿ ತರಲು ವಿಫಲವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸಲು ಸ್ಕಾಲರ್‌ಶಿಪ್‌ಗೆ ಅವಲಂಬಿತರಾಗಿದ್ದಾರೆ. ಈ ಅವ್ಯವಸ್ಥೆಯಿಂದಾಗಿ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಮೇಲೆ ಸರಕಾರಕ್ಕಿರುವ ಬೇಜವಾಬ್ದಾರಿತವನ್ನು ಎತ್ತಿ ತೋರಿಸುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪ್ಪಿನಂಗಡಿ ವಲಯ ಅಧ್ಯಕ್ಷ ರಿಝ್ವಾನ್, ಪುತ್ತೂರು ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಝ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *