Header Ads
Header Ads
Breaking News

ಸ್ಕೂಟರ್-ಲಾರಿ ಮುಖಾಮುಖಿ ಡಿಕ್ಕಿ: ಮಹಿಳೆ ಮೃತ್ಯು

ಲಾರಿ ಮತ್ತು ಸ್ಕೂಟರ್ ನಡುವೆ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತ ಪಟ್ಟು, ಆಕೆಯ ಪತಿ ಗಾಯಗೊಂಡಿರುವ ಘಟನೆ ಮುಡಿಪು ಮಿತ್ತಕೋಡಿ ಸಮೀಪ ಸಂಭವಿಸಿದೆ. ಉದ್ರಿಕ್ತ ಗುಂಪು ಘಟನೆಗೆ ಕಾರಣವಾದ ಲಾರಿಯ ಗಾಜಿಗೆ ಕಲ್ಲು ತೂರಾಟ ನಡೆಸಿದೆ.ಪಾನೇಲ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಜುಬೈದಾ(35) ಸಾವನ್ನಪ್ಪಿದವರು. ಪತಿ ಇಸ್ಮಾಯಿಲ್ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾನೇಲ ಕಡೆಯಿಂದ ಮುಡಿಪುವಿಗೆ ಆಕ್ಟಿವಾ ಸ್ಕೂಟರಿನಲ್ಲಿ ತೆರಳುತ್ತಿದ್ದ ದಂಪತಿಗೆ ಎದುರಿನಿಂದ ಮುಡಿಪು ಕಡೆಯಿಂದ ಮೆಲ್ಕಾರ್ ಕಡೆಗೆ ಕಪ್ಪು ಕಲ್ಲು ಹೊತ್ತ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಹಿಂಬದಿ ಚಕ್ರದಡಿ ಮಹಿಳರ ಸಿಲುಕಿದ್ದರಿಂದಾಗಿ ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ ಕಾರಣವಾದ ಲಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ಗುಂಪು ಲಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಲಾರಿ ಗಾಜುಗಳಿಗೆ ಹಾನಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಕೊಣಾಜೆ ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Related posts

Leave a Reply