Header Ads
Breaking News

ಸ್ಥಳೀಯಾಡಳಿತದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ : ಐವನ್ ಡಿ‘ಸೋಜ ಮನವಿ

ಸುಲಲಿತ ಆಡಳಿತಕ್ಕಾಗಿ ಅನೇಕ ಕಡೆ ಸ್ಥಳೀಯ ಸಂಸ್ಥೆಗಳನ್ನು ಮೇಲ್ದಜೆಗೇರಿಸಿ ಅತಿ ಹೆಚ್ಚು ಮೂಲಭೂತ ಸೌಕರ್‍ಯಗಳಿಗೆ ಅನುದಾನ ಬಿಡುಗಡೆ ಮಾಡಿರುವ ಸರಕಾರ ಕಾಂಗ್ರೆಸ್. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್ಲಾ ಜಾತಿ, ಸಮುದಾಯದವರಿಗೆ ಸ್ಪರ್ಧಿಸಲು ಅವಕಾಶ ನೀಡಿ ಸಾಮಾಜಿಕ ನ್ಯಾಯ ಕೊಟ್ಟ ಪಕ್ಷ ಕಾಂಗ್ರೆಸ್ ರಾಜ್ಯದಲ್ಲಿ ಮೈತ್ರಿ ಸರ್ಕಾರ ಆಡಳಿತದಲ್ಲಿರುವುದರಿಂದ ಅಭಿವೃದ್ಧಿಯ ದೃಷ್ಟಿಯಿಂದ ಜಿಲ್ಲೆಯಲ್ಲಿರುವ ಸ್ಥಳೀಯಾಡಳಿತದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮುಖ್ಯಮಂತ್ರಿಗಳ ಸಂಸದೀಯ ಕಾರ್‍ಯದರ್ಶಿ ಐವನ್ ಡಿ‘ಸೋಜ ಮನವಿ ಮಾಡಿದರು. ಮೂಡುಬಿದಿರೆಯ ಕಾಂಗ್ರೆಸ್ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಈ ಸಂದರ್ಭ ಮಾಜಿ ಸಚಿವ ಅಭಯಚಂದ್ರ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸನಿಲ್, ಪ್ರಚಾರ ಸಮಿತಿ ಅಧ್ಯಕ್ಷರಾದ ರಾಘು ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

 

Related posts

Leave a Reply

Your email address will not be published. Required fields are marked *