Header Ads
Breaking News

ಹಕ್ಕಿ ಜ್ವರದ ಬಗ್ಗೆ ಆತಂಕಬೇಡ, ಜಾಗೃತಿ ಮೂಡಿಸಬೇಕು; ಸಿಂಧೂ ಬಿ. ರೂಪೇಶ್

ಮಂಗಳೂರು: ಹಕ್ಕಿ ಜ್ವರದ ಬಗ್ಗೆ ಆತಂಕಬೇಡ, ಇದರ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಎಂದು ಜಿಲ್ಲಾಧಿಕಾರಿ ಬಿ.ಸಿಂಧೂ ರೂಪೇಶ್ ಹೇಳಿದರು. ಅವರು, ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಹಕ್ಕಿ ಜ್ವರ ನಿಯಂತ್ರಿಸಲು ಪ್ರಾಣಿಜನ್ಯ ರೋಗ ತುರ್ತು ನಿರ್ವಹಣಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ನಿಗಾವಹಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

 

ಈ ಕುರಿತು ಜನರಲ್ಲಿ ಹೆಚ್ಚು ಅರಿವು ಮೂಡಿಸಬೇಕು ಎಂದು ಸೂಚಿಸಿದರು. ಜೊತೆಗೆ ಅಗತ್ಯ ಸಲಕರಣೆಗಳಾದ ಹ್ಯಾಂಡ್ ಸ್ಪ್ರೇ, ಮುಖಗವಸು ಮುಂತಾದ ಅಗತ್ಯ ವಸ್ತುಗಳನ್ನು ಜಿಲ್ಲಾ ವಿಪತ್ತು ವಿಭಾಗದಿಂದ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ 5 ಚೆಕ್‌ಪೋಸ್ಟ್‌ಗಳಲ್ಲಿ ಹೊರ ರಾಜ್ಯದಿಂದ ಬರುವ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ ಇಲಾಖೆ ವತಿಯಿಂದ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ. ಎಲ್ಲಾ ತಾಲೂಕಿನಿಂದ ರಕ್ತದ ಮಾದರಿಯನ್ನು ಸಂಗ್ರಹಿಸಿ ಬೆಂಗಳೂರಿನ ಪ್ರಯೋಗ ಶಾಲೆಗೆ ನೀಡುತ್ತಿದ್ದೇವೆ ಇದುವರೆಗೆ ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಜಿಲ್ಲೆಯ ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಜಯರಾಜ್ ಹೇಳಿದರು.

 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

——-

Related posts

Leave a Reply

Your email address will not be published. Required fields are marked *