Header Ads
Breaking News

ಹತ್ರಾಸ್‌ನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಸುಳ್ಯದಲ್ಲಿ ಪ್ರತಿಭಟನೆ

ಉತ್ತರಪ್ರದೇಶದ ದಲಿತ ಯುವತಿಯ ಮೇಲೆ ನಡೆದ ಘಟನೆಯನ್ನು ಎಲ್ಲರೂ ಖಂಡಿಸಬೇಕಾಗಿದೆ. ಆ ನಿಟ್ಟಿನಲ್ಲಿ ಅನ್ಯಾಯವಾದ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ನಮ್ಮ ಹೋರಾಟ. ಈ ಹೋರಾಟ ಇಲ್ಲಿಗೆ ನಿಲ್ಲದೆ ಗ್ರಾಮ ಗ್ರಾಮ ಮಟ್ಟದಲ್ಲಿ ನಡೆಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಹೇಳಿದರು.


ಸುಳ್ಯದಲ್ಲಿ ವಿವಿಧ ರಾಜಕೀಯ ಪಕ್ಷಗಳ, ತಾಲೂಕಿನ ದಲಿತ ಸಂಘಟನೆಗಳು ಹಾಗೂ ಸಮಾನ ಮನಸ್ಕರ ಸಹಯೋಗದಲ್ಲಿ ಉತ್ತರ ಪ್ರದೇಶದ ಹಥಾರಸ್‌ನಲ್ಲಿ ದಲಿತ ಯುವತಿಯ ಮೇಲೆ ಸಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ದ ನಡೆದ ಪ್ರತಿಭಟನೆ ಮತ್ತು ರಸ್ತೆ ತಡೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರಕಾರದ ಆಡಳಿತಕ್ಕೆ ಬಂದಾಗ ಬಲಿಷ್ಟ ಭಾರತ – ಸ್ವಾಭಿಮಾನದ ಭಾರತ ಕಲ್ಪನೆ ನಮ್ಮದು ಎಂದು ಹೇಳಿತು. ಆದರೆ ಈಗ ಅತ್ಯಾಚಾರಿಗಳನ್ನು ರಕ್ಷಿಸುವುದೇ ಅವರ ಕಲ್ಪನೆಯೇ ಎಂದು ನಾವು ತಿಳಿಯಬೇಕಾಗಿದೆ. ಉತ್ತರ ಪ್ರದೇಶದ ಘಟನೆಯ ಬಗ್ಗೆ ಬಿಜೆಪಿ ಯಾಕೆ ಮಾತನಾಡೋದಿಲ್ಲ ಎಂದ ಖಾದರ್ ರವರು ಬಡವರಿಗೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ, ಕಾನೂನು ತಂದ ಪಕ್ಷ ಇದ್ದರೆ ಅದು ಕಾಂಗ್ರೆಸ್. ಅನ್ಯಾಯದ ವಿರುದ್ದ ನಮ್ಮ ಹೋರಾಟ ನಿರಂತರ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಕಾರ್ಮಿಕ ಮುಖಂಡ ಕೆ.ಪಿ.ಜಾನಿ, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *