Header Ads
Breaking News

ಹತ್ರಾಸ್‍ನಲ್ಲಿ ನಡೆದ ಯುವತಿಯ ಅತ್ಯಾಚಾರ-ಕೊಲೆಗೆ ಖಂಡನೆ : ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ದ.ಕ. ಜಿಲ್ಲಾ ಶಾಖೆಯ ವತಿಯಿಂದ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧದ ಎದುರು ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ. ದೇವದಾಸ್ ಅವರು, ಯುವತಿಯು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಕೆಯ ಶವವನ್ನು ಆಕೆಯ ಹೆತ್ತವರ ವಶಕ್ಕೆ ನೀಡದೆ ಪೊಲೀಸರೆ ಆಂಬುಲೆನ್ಸ್‍ನಲ್ಲಿ ಕೊಂಡೊಯ್ದು ಮಧ್ಯರಾತ್ರಿ ಅಂತ್ಯಸಂಸ್ಕಾರ ಮಾಡಿರುವುದು ತೀರಾ ಅಮಾನವೀಯವಾಗಿದೆ. ಈ ಪ್ರಕರಣ 2012ರ ನಿರ್ಭಯಾ ಗ್ಯಾಂಗ್ ರೇಪ್‍ಗಿಂತಲೂ ನೀಚ ಮತ್ತು ಕ್ರೂರವಾದುದು. ಅತ್ಯಾಚಾರಿಗಳನ್ನು ಕೂಡಲೇ ಗಲ್ಲಿಗೆ ಏರಿಸಬೇಕು. ಸಂತ್ರಸ್ತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರವನ್ನು ಘೋಷಿಸಬೇಕು ಎಂದು ಆಗ್ರಹಿಸಿದರು. ಸಮಿತಿಯ ಪ್ರಮುಖರಾದ ರಘು ಕೆ. ಎಕ್ಕಾರು, ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *