Header Ads
Breaking News

ಹರಿಪಾದ ಸೇರಿದ ಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ : ಮಂಗಳಮುಖಿಯರಿಂದ ನುಡಿ ನಮನ

ಆಶ್ರಯ ಸಮುದಾಯ ಸಂಘಟನೆಯ ವತಿಯಿಂದ ಹರಿಪಾದ ಸೇರಿದ ಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಉಡುಪಿಯ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಈ ಕಾರ್ಯಕ್ರಮ ನಡೆಯಿತು. ಮಂಗಳಮುಖಿಯರ ಸಂಘಟನೆಯಾದ ಆಶ್ರಯ ಸಮುದಾಯ ಸಂಘಟನೆಯ ಜಿಲ್ಲಾ ಸಮಿತಿಯ ವತಿಯಿಂದ ಈ ಶೃದ್ದಾಂಜಲಿ ಕಾರ್ಯಕ್ರಮ ನಡೆದಿದ್ದು ಮೊದಲು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರಕ್ಕೆ ಹೂ ಅರ್ಪಿಸಿ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚಿಂತಕರಾದ ಥಾಮಸ್ ಸುವಾರಿಸ್, ಮಹಿಳೆ ಮತ್ತು ಮಕ್ಕಳ ಇಲಾಖೆಯ ಅವಿನಾಶ್, ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದ ಪ್ರತಿನಿಧಿ ಸಂಜೀವ, ಆಶ್ರಯ ಸಮುದಾಯ ಸಂಘಟನೆಯ ಅಧ್ಯಕ್ಷ ಸುದರ್ಶನ್, ಜಯಶ್ರೀ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *