Header Ads
Breaking News

ಹರೀಶ್ ಬಂಧನದಲ್ಲಿ ಸ್ಥಳೀಯರ ಕೈವಾಡವಿರುವ ಶಂಕೆ : ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿಕೆ

ಸೌದಿ ಅರಸನ ವಿರುದ್ಧ ಅವಹೇಳನಕಾರಿ ಪೋಸ್ಟ್‌ವೊಂದನ್ನು ಶೇರ್ ಮಾಡಿದ ಆರೋಪದ ಮೇಲೆ ಕುಂದಾಪುರದ ಕೋಟೇಶ್ವರ ಮೂಲದ ಯುವಕನೋರ್ವನನ್ನು ಸೌದಿ ಪೊಲೀಸರು ವಿಚಾರಣೆಗೆ ಕರೆದೊಯ್ದ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಬೀಜಾಡಿ ನಿವಾಸಿ ಹರೀಶ್ ಬಂಗೇರ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸೌದಿ ಅರೇಬಿಯಾದ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಹರೀಶ್ ಬಂಗೇರ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಹತ್ಯೆಯನ್ನು ’ಹರೀಶ್ ಬಂಗೇರ ಎಸ್’ ಎನ್ನುವ ತಮ್ಮ ಫೇಸ್‌ಬುಖದ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು. ಕೂಡಲೇ ಅಲ್ಲಿನ ಯುವಕರು ಹರೀಶ್ ಕೆಲಸ ನಿರ್ವಹಿಸುತ್ತಿರುವ ಕಚೇರಿಗೆ ತೆರಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಬಂಧಿಸುವ ಹುನ್ನಾರ ಮಾಡುತ್ತಿದ್ದಾರೆಂಬ ಆರೋಪ ಹರೀಶ್ ಬಂಗೇರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಹರೀಶ್ ಬಂಗೇರ ಬಂಧನ ಸಂಸದರ ಗಮನಕ್ಕೆ ತಂದಿದ್ದೇವೆ. ಸಂಸದರು ಕೆಲವು ದಾಖಲೆಗಳನ್ನು ಕಳುಹಿಸಲು ಹೇಳಿದ್ದಾರೆ,. ವಿದೇಶಾಂಗ ಸಚಿವರ ಗಮನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. ತನ್ನದಲ್ಲದ ತಪ್ಪಿಗೆ ಹರೀಶ್ ಬಂಧನಕ್ಕೊಳಗಾಗಿದ್ದಾರೆ. ಹರೀಶ್ ಬಂಧನದಲ್ಲಿ ಸ್ಥಳೀಯರ ಕೈವಾಡವಿರುವ ಶಂಕೆಯೂ ಇದೆ ಎಂದು ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದ್ದಾರೆ.

Related posts

Leave a Reply

Your email address will not be published. Required fields are marked *