
ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚವಲಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ದೇವಾಲಯದ ಲೋಕಾರ್ಪಣೆ ಮತ್ತು ಶ್ರೀ ಮಲ್ಲೇಶ್ವರಸ್ವಾಮಿ ಮತ್ತು ವೀರಭದ್ರೇಶ್ವರಸ್ವಾಮಿ ದೇವರುಗಳ ವಿಗ್ರಹ ಪುನರ್ ಪ್ರಾಣ ಪ್ರತಿμÁ್ಠಪನಾ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪಂಚಪೀಠಗಳಲ್ಲಿ ಒಂದಾದ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಮಹಾಸಂಸ್ಥಾನ ಪೀಠದ ಜಗದ್ಗುರುಗಳಾದ ಶ್ರೀ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಪುರಪ್ರವೇಶ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯುವುದರೊಂದಿಗೆ ಕಾರ್ಯಕ್ರಮಕ್ಕೆ ಮೆರುಗು ನೀಡಿತು. ವೇದಿಕೆ ಕಾರ್ಯಕ್ರಮದಲ್ಲಿ ಭಕ್ತಾದಿಗಳನ್ನು ಕುರಿತು ಮಾತನಾಡಿದ ಶ್ರೀಗಳು ಆಶಿರ್ವಚನ ನೀಡಿದ್ರು.
ಕಾರ್ಯಕ್ರಮದಲ್ಲಿ ಸಂಕಲಾಪುರ ಮಠದ ಶ್ರೀ ಧರ್ಮ ರಾಜೇಂದ್ರ ಸ್ವಾಮಿಗಳು, ತೆಂಕಲಗೋಡು ಬೃಹನಮಠ ಹಳಸೂರಿನ ಚನ್ನ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿಗಳು, ಹಿರೇಮಠ ಕಾರ್ಜುವಳ್ಳಿಯ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ಹಾಜರಿದ್ದರು.