Header Ads
Breaking News

ಹಿಂದೂ ಯುವಕರ ಕೊಲೆಯಾದಾಗ ಮನೆಮಂದಿಗೆ ಸಾಂತ್ವನ ಹೇಳಲು ಹೋಗಿದ್ದೇನೆ: ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಕೇತ್ರದಲ್ಲಿ ಮಹಿಳಾ ಬಿಜೆಪಿ ಅಭ್ಯಾರ್ಥಿಯಾಗಿ ಮಹಿಳೆಯರ ಧ್ವನಿಯಾಗಿ ಕೆಲಸ ಮಾಡಲು ನಿಂತಿದ್ದೇನೆ, ಹಿಂದೂ ಯುವಕರ ಕೊಲೆಯಾದಾಗಲೂ ಅವರ ಮನೆಮಂದಿಗೆ ಸಾಂತ್ವನ ಹೇಳಲು ಹೋಗಿದ್ದೇನೆ ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಬಿಸಿಲನ್ನೂ ಲೆಕ್ಕಿಸದೆ ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಚಾರ ಕಾರ್ಯ ನಡೆಸ ಬೇಕಾಗದೆ ಎಂಬುದಾಗಿ ಶೋಭ ಕರಂದ್ಲಾಜೆ ಹೇಳಿದ್ದಾರೆ.

ಉಚ್ಚಿಲದ ಖಾಸಗಿ ಸಭಾಂಗಣದಲ್ಲಿ ನಡೆದ ಮಹಿಳಾ ಕಾರ್ಯಕರ್ತರ ಸಭೆಯನ್ನುದ್ಧೇಶಿಸಿ ಮಾತನಾಡಿದರು, ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ನಮ್ಮ ಕರ್ನಾಟಕದ ಗುರು ವಿಚಾರವಾಗಿ ಜನರಿಗೆ ತಿಳಿಸಬೇಕು, ತ್ರಿವಳಿ ತಲಕ್ ಸಹಿತ ಅಪ್ರಪ್ತಾ ವಯಸ್ಸಿನ ಮಕ್ಕಳನ್ನು ಅತ್ಯಾಚಾರ ನಡೆಸಿದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತಂದ ಬಗ್ಗೆ ಜನರಿಗೆ ತಿಳಿಸಿ ಬಿಜೆಪಿಯನ್ನು ಗೆಲ್ಲಿಸುವಂತೆ ಜನರ ಮನವೊಲಿಸ ಬೇಕೆಂದರು.

ಈ ಸಂದರ್ಭ ವೇದಿಕೆಯಲ್ಲಿ ಶಾಸಕ ಲಾಲಾಜಿ ಮೆಂಡನ್, ಸುರೇಶ್ ಶೆಟ್ಟಿ ಗುರ್ಮೆ, ಗೀತಾಂಜಲಿ ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮುಂತಾದವರಿದ್ದರು.

Related posts

Leave a Reply

Your email address will not be published. Required fields are marked *