Header Ads
Breaking News

ಹಿರಿಯ ಕಮ್ಯುನಿಸ್ಟ್ ನೇತಾರ ಬಿ.ಮಾಧವ ನಿಧನ

ದ.ಕ. ಜಿಲ್ಲೆಯ ಹಿರಿಯ ಸಿಪಿಎಂ ಮುಖಂಡ, ಸಿಐಟಿಯು ಮಾಜಿ ರಾಜ್ಯಾಧ್ಯಕ್ಷ ಬಿ. ಮಾಧವ ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು, ಸಿಐಟಿಯು ರಾಜ್ಯಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ಕಾರ್ಯದರ್ಶಿ, ಸಿಐಟಿಯು ಅಧ್ಯಕ್ಷ – ಹೀಗೆ ಹಲವು ಜವಾಬ್ದಾರಿ ಸ್ಥಾನಗಳಲ್ಲಿ ಹಾಗು ಕಾರ್ಮಿಕ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗು ಬಂಧುಬಳಗವನ್ನು ಅಗಲಿದ್ದಾರೆ.

Related posts

Leave a Reply

Your email address will not be published. Required fields are marked *