Header Ads
Header Ads
Breaking News

ಹಿರಿಯ ನಾಯಕರ ಸಲಹೆ ಪಡೆದು ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಕೇರಳದ ಎರ್ನಾಕುಲಂನಲ್ಲಿ ಬಿಜೆಪಿ ರಾಜ್ಯರಾಜಕಾರಿಣಿ ಸಭೆಯಲ್ಲಿ ಭಾಗವಹಿಸಿ ಇಂದು ಮುಂಜಾನೆ ಮಂಗಳೂರಿನ ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಿಂದ ಸ್ವಾಗತಿಸಿದ್ದಾರೆ..ಆರತಿ ಬೆಳಗಿ, ಶಾಲು ಹಾರ ಹಾಕಿ ಜಿಲ್ಲಾ ಬಿಜೆಪಿ ಮುಖಂಡರು ನಳಿನ್ ಕುಮಾರ್ ಕಟೀಲ್ ರನ್ನು ಸ್ವಾಗತ ಮಾಡಿದ್ದಾರೆ.ಈ ವೇಳೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಯ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಭರವಸೆಯಿಟ್ಟು ಸ್ಥಾನ ನೀಡಿದ್ದಾರೆ.ಆ ನಿರೀಕ್ಷೆಗೆ ಚ್ಯುತಿ ಬಾರದಂತೆ ಕೆಲಸ ಮಾಡಿ, ರಾಜ್ಯದ ಹಿರಿಯ ನಾಯಕರ ಸಲಹೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡೋದಾಗಿ ಹೇಳಿದ್ದಾರೆ..ಇದೇ ವೇಳೆ ಹಾರ ತುರಾಯಿ ಶಾಲು ಹಾಕುವ ಬದಲು ಆ ಹಣವನ್ನು ರಾಜ್ಯದ ನೆರೆ ಸಂತ್ರಸ್ತರಿಗೆ ನೀಡುವಂತೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ

Related posts

Leave a Reply

Your email address will not be published. Required fields are marked *