Header Ads
Breaking News

ಹಿರಿಯ ಬಿಜೆಪಿ ಕಾರ್ಯಕರ್ತ ರಘು ಕೆ. ನಿಧನ

ಮಂಗಳೂರು: ಬಿಜೆಪಿ ಹಿರಿಯ ಕಾರ್ಯಕರ್ತರಾಗಿದ್ದ, ಮಂಗಳೂರಿನ ಪಡೀಲ್ ನಿವಾಸಿ ರಘು ಕೆ. ಅವರು ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರಿನ ಪಡೀಲ್ ಬಳಿ ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದ ರಘು ಅವರನ್ನು ಕೆಲ ದಿನಗಳ ಹಿಂದಷ್ಟೇ ಖಾಸಗಿ ಚಿಕಿತ್ಸಾಲಯಕ್ಕೆ ದಾಖಲು ಮಾಡಲಾಗಿತ್ತು. ಆದರೆ ಆರೋಗ್ಯ ಪರಿಸ್ಥಿತಿ ಉಲ್ಬಣಿಸಿ ಫೆಬ್ರವರಿ 4ರಂದು ಸಂಜೆ 7 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ರಘು ಕೆ. ಅವರು ಬಜಾಲ್ ಗ್ರಾಮದ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ 6 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದರು. ಈ ಅವಧಿಯಲ್ಲಿ ಕೇಂದ್ರ ಸಚಿವರು ಮತ್ತು ಸ್ಥಳೀಯ ಶಾಸಕರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾನಗಳನ್ನು ತರಿಸುವಲ್ಲಿ ಶ್ರಮಿಸಿದ್ದರು. ಅಶಕ್ತರಿಗೆ ನೆರವಾಗುವ ಜೊತೆಗೆ ದಕ್ಷಿಣ ಕನ್ನಡ ಟ್ಯಾಕ್ಸಿ ಅಸೋಸಿಯೇಷನ್‍ನ ಕೋಶಾಧಿಕಾರಿಯಾಗಿಯೂ ಸತತ ಆರು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದರು. ತಮ್ಮ ಸೇವೆಗಾಗಿ ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನಗಳನ್ನು ಕೂಡ ಸ್ವೀಕರಿಸಿದ್ದರು.ಮೃತ ರಘು ಕೆ. ಅವರು ಪತ್ನಿ ಚಂದ್ರಾವತಿ, ಪುತ್ರ ಜೀವನ್ ಪ್ರಕಾಶ್, ಸೊಸೆ ಪ್ರೀತಿ ಜಿ., ಮೊಮ್ಮಗಳು ಋತ್ವಿಜಾ ಸಹಿತ ಕುಟುಂಬಸ್ಥರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

Leave a Reply

Your email address will not be published. Required fields are marked *