Header Ads
Breaking News

ಹಿರಿಯ ಯಕ್ಷಗಾನ ಕಲಾವಿದ ವಾಸುದೇವ ಸಾಮಗ ನಿಧನ

ಯಕ್ಷಗಾನ ರಂಗದ ಹಿರಿಯ ಕಲಾವಿದ, ಸಂಘಟಕರಾದ ಮಲ್ಪೆ ವಾಸುದೇವ ಸಾಮಗ ಅವರು ನಿಧನ ಹೊಂದಿದ್ದಾರೆ.ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ (71) ಅವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು. ಅಲ್ಪ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ತೆಂಕು-ಬಡಗು ತಿಟ್ಟಿನ ಸವ್ಯಸಾಚಿ ಕಲಾವಿದರೆಂದು ಗುರುತಿಸಲ್ಪಟ್ಟ ವಾಸುದೇವ ಸಾಮಗರ ತಂದೆ ಮತ್ತು ದೊಡ್ಡಪ್ಪ ಆಗಿನ ಮಹಾನ್ ಕಲಾವಿದರು ಮತ್ತು ಹರಿದಾಸರಾದ ಕಾರಣ ಇವರು ಸಹಜವಾಗಿಯೇ ಯಕ್ಷಗಾನದ ಒಲವು ಹೊಂದಿದ್ದರು. ಕೋಟ ಶ್ರೀಧರ ಹಂದೆಯವರ ಒತ್ತಾಸೆಯ ಮೇರೆಗೆ ಪ್ರಥಮ ಬಾರಿಗೆ ದೊಡ್ಡ ಕೂಟದಲ್ಲಿ ಅರ್ಥದಾರಿಯಾಗಿ ಗಮನ ಸೆಳೆದು ಅವರದ್ದೇ ಯಜಮಾನಿಕೆಯ ಅಮೃತೇಶ್ವರಿ ಮೇಳದಲ್ಲಿ ವೃತ್ತಿರಂಗಕ್ಕೆ ಕಾಲಿಟ್ಟರು. ನಾರಣಪ್ಪ ಉಪ್ಪೂರರ ಒಡನಾಟದದಲ್ಲಿ ಪರಿಪೂರ್ಣ ಕಲಾವಿದರಾಗಿ ಆ ಮೇಳದಲ್ಲಿ ಗುರುತಿಸಿಕೊಂಡರು.ಅಲ್ಲಿ ದೊಡ್ಡ ಸಾಮಗರು, ಚಿಟ್ಟಾಣಿಯವರು, ಕೋಟ ವೈಕುಂಠ, ಎಂ.ಎ.ನಾಯಕ್, ನಗರ ಜಗನ್ನಾಥ ಶೆಟ್ಟಿ, ಗೋಡೆ ನಾರಾಯಣ ಹೆಗಡೆಯವರಂತ ಘಟಾನುಘಟಿಗಳ ಸಾಂಗತ್ಯ ದೊರೆಯಿತು. ಆಗ ಪ್ರದರ್ಶನಗೊಳ್ಳುತ್ತಿದ್ದ ಯಕ್ಷಲೋಕ ವಿಜಯ ಪ್ರಸಂಗದ ಪ್ರದೀಪನ ಪಾತ್ರ ಅವರಿಗೆ ಅಪಾರ ಜನಮನ್ನಣೆ ಗಳಿಸಿಕೊಟ್ಟಿತು. ವಾಸುದೇವ ಸಾಮಗ ಅವರು ಬಂಧುಮಿತ್ರರು ಅಪಾರ ಅಭಿಮಾನಿ ಬಳಗದವರನ್ನು ಅಗಲಿದ್ದಾರೆ.

Related posts

Leave a Reply

Your email address will not be published. Required fields are marked *