Header Ads
Breaking News

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕಂದಮ್ಮ : ಝೀರೋ ಟ್ರಾಫಿಕ್‍ನಲ್ಲಿ ಸಾಗಿದ ಆ್ಯಂಬುಲೆನ್ಸ್

ಮಂಗಳೂರು : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನಿಗೆ ಬೆಂಗಳೂರಲ್ಲಿ ಚಿಕಿತ್ಸೆ ನೀಡಲು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು. 40 ದಿನದ ಸೈಫುಲ್ ಅಝ್ಮಾನ್ ಎಂಬ ಮಗುವೊಂದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ಮಗುವನ್ನು ಕೊಂಡೊಯ್ಯಲಾಗಿದೆ. ಮಂಗಳೂರಿನಿಂದ ಹೊರಟು ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಲಿದೆ. ಝೀರೋ ಟ್ರಾಫಿಕ್ ವ್ಯವಸ್ಥೆಗೆ ರಾಜ್ಯ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಿದೆ. ಜೊತೆಗೆ ಪೊಲೀಸ್ ರು, ವಿವಿಧ ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನರ ನೆರವಿನೊಂದಿಗೆ ಸಂಚಾರ ಸುಗಮಗೊಳಿಸಲಾಯಿತ್ತು.

Related posts

Leave a Reply

Your email address will not be published. Required fields are marked *