Header Ads
Breaking News

ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಖಂಡನೆ : ವಿನೂತನವಾಗಿ ಪ್ರತಿಭಟನೆ

ದೇಶದಾದ್ಯಂತ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ವಿರೋಧಿಸಿ ಸಾಮಾಜಿಕ ಸಂಘಟನೆಗಳ ಕಾರ್ಯಕತರು ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ವಿನೂತನವಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡರು.

ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ವಿರೋಧಿಸಿ ಸಾಮಾಜಿಕ ಕಾರ್ಯಕರ್ತರು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಅಣುಕು ಶವ ಇರಿಸಿ, ಮಖಕ್ಕೆ ಕಪ್ಪು ಬಟ್ಟೆ ಧರಿಸಿಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅನ್ಸಾರ್ ಅಹಮದ್ ಅತ್ಯಾಚಾರ, ಅನಾಚಾರದಂತಹ ದೌರ್ಜನ್ಯ ಪ್ರಕರಣಗಳು ಹೆಣ್ಣುಮಕ್ಕಳ ಮೇಲೆ ದಿನೆ ದಿನೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯ. ಸರಕಾರವು ಎಚ್ಚೆತ್ತು ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕಠಿಣ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ಯುವಶಕ್ತಿ ಅಧ್ಯಕ್ಷ ಪ್ರಮೋದ್ ಉಚ್ಚಿಲ, ಸುಧಿರ್ ಪೂಜಾರಿ, ರಾಮಾಂಜಿ, ಸೈಯದ್ ನಿಝಾಮುದ್ದಿನ್, ಹಮದ್, ನಾಸಿರ್, ಮೊದಲಾದವರು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *