Header Ads
Header Ads
Header Ads
Breaking News

ಹೈಕಮಾಂಡ್ ಬಯಸಿದರೆ ಉ.ಕ.ದಿಂದ ಸ್ಪರ್ಧೆ ಸ್ಪರ್ಧೆ ಬಗ್ಗೆ ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ

ಮುಂದಿನ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ತಾವು ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಚಿತಪಡಿಸಿದ್ದಾರೆ.

ಕಲಬುರಗಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಕ್ಷೇತ್ರವೊಂದನ್ನು ಆಯ್ಕೆ ಮಾಡಿಕೊಳ್ಳಲು ಪಕ್ಷದ ನಾಯಕರು ಸೂಚಿಸಿದ್ದಾರೆ. ತಾವು ಶಿಕಾರಿಪುರ ಕ್ಷೇತ್ರದಿಂದ ಹಲವು ವರ್ಷಗಳಿಂದ ಸ್ಪರ್ಧಿಸುತ್ತಾ ಬಂದಿದ್ದು ಈ ಬಾರಿ ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸಲು ತಮಗೂ ಇಚ್ಛೆಯಿದೆ ಎಂದು ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಿರಾ ಎಂದು ಸುದ್ದಿಗಾರರು ಕೇಳಿದಾಗ, ಆ ಬಗ್ಗೆ ಇನ್ನೂ ಯೋಚಿಸಿಲ್ಲ. ಆದರೆ ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

Related posts

Leave a Reply