Header Ads
Header Ads
Breaking News

ಹೈನುಗಾರಿಕೆಗೆ ಉತ್ತಮ ಸವಲತ್ತು ಸೇವೆ 28 ಲಕ್ಷ ರೂ. ವೆಚ್ಚದಲ್ಲಿ ಸುಸಜ್ವಿತ ಪಶುಚಿಕಿತ್ಸಾಲಯ ಶಾಸಕ ಅಭಯಚಂದ್ರ ಜೈನ್ ಹೇಳಿಕೆ

ಕಿನ್ನಿಗೋಳಿ ಸುತ್ತಮುತ್ತಲ ಗ್ರಾಮೀಣ ಪ್ರದೇಶದ ರೈತರು ಮತ್ತು ಹೈನುಗಾರರಿಗೆ ಉತ್ತಮ ಸವಲತ್ತು ಸೇವೆಗಳನ್ನು ನೀಡುವ ಹಿತದೃಷ್ಟಿಯಿಂದ ೨೮ ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಪಶುಚಿಕಿತ್ಸಾಲಯ ನಿರ್ಮಾಣಗೊಳ್ಳಲಿದೆ ಎಂದು ಮುಲ್ಕಿ ಮೂಡಬಿದ್ರೆ ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.

ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪಿಯ ರಾಜರತ್ನಪುರದಲ್ಲಿ ಸರಕಾರದ ಆರ್‌ಐಡಿ‌ಎಫ್ ೨೦೧೬-೧೭ ರ ಯೋಜನೆಯಲ್ಲಿ ನಿರ್ಮಾಣಗೊಳ್ಳಲಿರುವ ಪಶು ಚಿಕಿತ್ಸಾಲಯಕ್ಕೆ ಭಾನುವಾರ ಭೂಮಿಪೂಜೆ ನಡೆಸಿ ಮಾತನಾಡಿ ಗ್ರಾಮೀಣ ಪ್ರದೇಶದ ಕೃಷಿ ಮತ್ತು ರೈತರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಸರಕಾರ ವಿವಿಧ ಸವಲತ್ತುಗಳನ್ನು ಒದಗಿಸುತ್ತಿದೆ ಎಂದರು.

ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾ. ಪಂ. ಸದಸ್ಯರಾದ ದಿವಾಕರ ಕರ್ಕೇರಾ, ಶುಭಲತಾ ಶೆಟ್ಟಿ, ಕಟೀಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರಿ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಉಪಾಧ್ಯಕ್ಷೆ ಸುಜಾತ ಪೂಜಾರಿ, ಪಶು ಸಂಗೋಪನ ಇಲಾಖೆಯ ಉಪ ನಿರ್ದೇಶಕ ಡಾ. ಟಿ. ತಿಪ್ಪೇಸ್ವಾಮಿ , ಕಿನ್ನಿಗೋಳಿ ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸತ್ಯಶಂಕರ್ , ವೇದವ್ಯಾಸ ಉಡುಪ ದೇವಸ್ಯ, ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಾಜಣ್ಣ,
, ನಿರ್ಮಿತಿ ಕೇಂದ್ರದ ಸಂಯೋಜಕ ರಾಜೇಂದ್ರ ಕಲ್ಬಾವಿ, ಗುತ್ತಿಗೆದಾರ ಸಂತೋಷ್ ಕುಮಾರ್ ಹೆಗ್ಡೆ, ದೇವಿ ಪ್ರಸಾದ್ ಹೆಗ್ಡೆ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ವರದಿ: ನಿಶಾಂತ್ ಮುಲ್ಕಿ

Related posts

Leave a Reply