Breaking News

ಹೈಬ್ರೀಡ್ ಪ್ಲಾನೆಟೋರಿಯಂ ವರ್ಷಾಂತ್ಯದೊಳಗೆ ಉದ್ಘಾಟನೆ

ಮಂಗಳೂರಿನ ಪಿಲಿಕುಳದ ಡಾ.ಶಿವರಾಮ ಕಾರಂತ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರದ ಮೊದಲ ತ್ರಿಡಿ ಹೈಬ್ರೀಡ್ ಪ್ಲಾನೆಟೋರಿಯಂ ಈ ವರ್ಷಾಂತ್ಯದೊಳಗೆ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್.ಸೀತಾರಾಮ ಹೇಳಿದ್ರು. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು,ಒಂದು ಕೋಟಿ ರೂ.ವೆಚ್ಚದಲ್ಲಿ ಆರಂಭವಾದ ಯೋಜನೆ ಇದೀಗ 35.75 ಕೋಟಿ ರೊ.ಗೆ ಏರಿಕೆಯಾಗಿದೆ.ಉದ್ಘಾಟನೆಯನ್ನು ರಾಷ್ಟ್ರಮಟ್ಟದ ಕಾರ್ಯಕ್ರಮವಾಗಿ ಆಯೋಜಿಸಲಾಗುತ್ತದೆ. ಜತೆಗೆ ಅಂತಾರಾಷ್ಟ್ರೀಯ ಕಾರ್ಯಾಗಾರ ನಡೆಸಲಾಗುತ್ತದೆ. ಸೆ.1ರಂದು ಮತ್ತೆ ಮಂಗಳೂರಿಗೆ ಭೇಟಿ ನೀಡಿ ಕಾರ್ಯಕ್ರಮದ ರೂಪುರೇಷೆ ತಯಾರಿಸಲಾಗುತ್ತದೆ ಎಂದರು. ಇನ್ನೂ ಪಿಲಿಕುಳ ನಿಸರ್ಗಧಾಮವನ್ನು ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕಿದೆ. ಆಮೂಲಕ ಪ್ರವಾಸಿಗರನ್ನು ಆಕರ್ಷಿಸಿ ನಿಸರ್ಗಧಾಮದ ಪ್ರತಿಯೊಂದು ಭಾಗವನ್ನೂ ತಲುಪಲು ವ್ಯವಸ್ಥೆ ಮಾಡಬೇಕಿದೆ ಎಂದರು.
ಈ ವೇಳೆ ಶಾಸಕರಾದ ಜೆ.ಆರ್.ಲೋಬೊ, ಮೊದಿನ್ ಬಾವಾ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ ಡಾ. ಎಚ್.ಹೊನ್ನೇಗೌಡ, ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply