
ಮಂಗಳೂರು ನಗರದ ಪ್ರದೇಶದ ಪ್ರಮುಖ ರಸ್ತೆಗಳು ಕೆಟ್ಟು ಹೋಗಿ, ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಈ ನಡುವೆ ರಸ್ತೆಗಳಲ್ಲಿ ಗುಂಡಿಗಳಿಂದ ತುಂಬಿದ್ದು, ಪ್ಯಾಚ್ವರ್ಕ್ ಕಾರ್ಯ ಕೂಡ ಪೂರ್ಣಗೊಂಡಿಲ್ಲ. ಇದನ್ನ ಮನಗಂಡ ಇಂಡಿಯನ್ ಸರ್ವಿಸ್ ಕ್ಲಬ್ನ 25ಕ್ಕೂ ಅಧಿಕ ಮಂದಿ ಸದಸ್ಯರು ತಮ್ಮದೇ ಸ್ವಂತ ಖರ್ಚಿನಲ್ಲಿ ರಸ್ತೆಯ ಹೊಂಡ, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡ್ತಾ ಇದ್ದಾರೆ. ನಗರದ ಜ್ಯೋತಿ ಸರ್ಕಲ್, ಹಂಪನಕಟ್ಟೆ, ಮಿಲಾಗ್ರಿಸ್ ರಸ್ತೆ, ಬಲ್ಮಠ, ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಿತ್ತು ಹೋಗಿರುವ ಇಂಟರ್ ಲಾಕ್, ಹೊಂಡ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡ್ತಾ ಇದ್ದಾರೆ. ಇವರ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.