Header Ads
Header Ads
Header Ads
Breaking News

ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಗೆ ಖಂಡನೆ ಕಾರ್ಕಳದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಕಾರ್ಕಳ ಬಿಜೆಪಿ ಯುವ ಮೋರ್ಚಾ ವತಿಯಿಂದ ಹೊನ್ನಾವರದ ಹಿಂದು ಕಾರ್ಯಕರ್ತ ಪರೇಶ್ ಮೇಸ್ತಾ ಕೊಲೆಯನ್ನು ಖಂಡಿಸಿ ಕಾರ್ಕಳ ಬಸ್ಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರವೀಣ್ ನಾಯಕ್ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಬಂದ ನಂತರ ಸುಮಾರು 26 ಹಿಂದು ಕಾರ್ಯಕರ್ತರ ಕೊಲೆಯಾಗಿದೆ. ಆದರೂ ಸರಕಾರ ಕಣ್ಣು ಮುಚ್ಚಿ ಕುಳಿತುಕೊಂಡಿದೆ. ಸಿದ್ದರಾಮಯ್ಯ ಸರಕಾರ ಹಿಂದು ವಿರೋಧಿಯಾಗಿ ವರ್ತಿಸುತ್ತಿದೆ. ಪೋಲಿಸರಿಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರೇಷ್ಮಾ ಉದಯ ಶೆಟ್ಟಿ ಹಾಗೂ ಇನ್ನಿತರ ಬಿ.ಜೆ.ಪಿ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಕೆ.ಎಂ. ಖಲೀಲ್ ಕಾರ್ಕಳ

Related posts

Leave a Reply