Header Ads
Breaking News

ಹೊಸದಾಗಿ ನಿರ್ಮಾಣ ಮಾಡಿದ ಮನೆಯ ಮೇಲೆ ಕುಸಿದ ಗುಡ್ಡ

ಹೊಸದಾಗಿ ನಿರ್ಮಾಣ ಮಾಡಿದ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದ ಘಟನೆ ಘಟನೆ ಬಂಟ್ವಾಳದ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ನಡೆದಿದೆ. ಈ ಸಂದರ್ಭ ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ನೂತನವಾಗಿ ನಿರ್ಮಿಸಿದ ಮನೆಯ ಹಿಂಬದಿಯ ಗುಡ್ಡ ಕುಸಿದು ಮನೆಯ ಭಾಗಕ್ಕೆ ಬಿದ್ದಿದೆ. ಇದ್ರಿಂದ ಈ ಮನೆ ಅಪಾಯದ ಅಂಚಿಗೆ ಬಂದು ತಲುಪಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಪಲ್ಲಿಪಾಡಿಗೆ ಹೋಗುವ ರಸ್ತೆಯು ಬ್ಲಾಕ್ ಆಗುವ ಸಂಭವವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪಾಣೆಮಂಗಳೂರು ಹೋಬಳಿ ಕಂದಾಯಾಧಿಕಾರಿ ರಾಮ ಕಾಟಿಪಳ್ಳ, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ಸಿಬ್ಬಂದಿ ಸದಾಶಿವ ಕೈಕಂಬ, ಶೀತಲ್ ಮಾಣಿ, ರೂಪೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

Leave a Reply

Your email address will not be published. Required fields are marked *