Header Ads
Breaking News

ಹೊಸ ಮನೆ ಅಥವಾ ಕಟ್ಟಡ ನಿರ್ಮಾಣ ಮಾಡುವಾಗ ಕಡ್ಡಾಯವಾಗಿ ಹಸಿರು ಕಟ್ಟಡ ನೀತಿ ಅನುಸರಿಸಬೇಕಿದೆ : ಯು.ಟಿ.ಖಾದರ್ ಹೇಳಿಕೆ

ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲಿ ‘ಮಳೆ ನೀರು ಕೊಯ್ಲು’ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ‘ಹಸಿರು ಕಟ್ಟಡ ನೀತಿ’ಗೆ ಸಂಬಂಧಿಸಿ ಕರಡು ನೀತಿ ಪ್ರಕಟಿಸಲಾಗಿದ್ದು, ಶೀಘ್ರವೇ ನೂತನ ನೀತಿ ಜಾರಿಗೆ ಬರಲಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಮುಂಬರುವ ದಿನದಲ್ಲಿ ನಗರ ವ್ಯಾಪ್ತಿಯಲ್ಲಿ ಹೊಸ ಮನೆ ಅಥವಾ ಕಟ್ಟಡ ನಿರ್ಮಾಣ ಮಾಡುವಾಗ ಕಡ್ಡಾಯವಾಗಿ ಹಸಿರು ಕಟ್ಟಡ ನೀತಿ ಅನುಸರಿಸಬೇಕಿದೆ. ಈ ಸಂಬಂಧ ಕಡು ನೀತಿ ಪ್ರಕಟಿಸಲಾಗಿದೆ ಎಂದರು.

ಕೇಂದ್ರ ಸರಕಾರಕ್ಕೆ ಗೋಹತ್ಯೆ ನಿಷೇಧದ ಬಗ್ಗೆ ನಿಜವಾದ ಕಾಳಜಿ ಇದ್ದಲ್ಲಿ ಸೂಕ್ತ ಕಾನೂನನ್ನು ಕೇಂದ್ರ ಸರಕಾರ ಜಾರಿಗೊಳಿಸಲಿ. ದೇಶ ಕಾನೂನಲ್ಲಿ ನಡೆಯಬೇಕು. ಭಯ-ಶಕ್ತಿಯಿಂದ ನಡೆಯಬಾರದು. ಜಿಲ್ಲೆಯಲ್ಲಿ ಯಾವುದೇ ರೀತಿಯ ಅಕ್ರಮ ಆದರೂ ಅದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗೋ ಸಾಗಾಟ ಕೂಡ ಇದರಲ್ಲಿ ಸೇರಿದೆ. ಕಾನೂನಿಗೆ ವಿರುದ್ಧ ಯಾರಾದರು ವರ್ತಿಸಿದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಮಂಗಳೂರು ಪಾಲಿಕೆಯಲ್ಲಿ ಆನ್‌ಲೈನ್ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯ ನೀಡುವ ಹಿನ್ನೆಲೆಯಲ್ಲಿ ಜುಲೈ ಮೊದಲ ವಾರದಲ್ಲಿ ನಗರಾಭಿವೃದ್ಧಿ ಇಲಾಖೆಯ ಎಲ್ಲಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲಿದ್ದಾರೆ ಎಂದರು.

Related posts

Leave a Reply

Your email address will not be published. Required fields are marked *